ಭಾರತದ ಪ್ರಜಾಪ್ರಭುತ್ವ ವಿಶ್ವದಲ್ಲೇ ಅತ್ಯುತ್ತಮ

voters day
Published on

ಪಡುಬಿದ್ರಿ: ವಿವಿಧತೆಯಲ್ಲಿ ಐಕ್ಯತೆ ಹೊಂದಿರುವ ಭಾರತ ವಿಶ್ವದಲ್ಲೇ ಅತ್ಯುತ್ತಮ ಸಂವಿಧಾನ ಮತ್ತು ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹಿರಿಮೆ ಹೊಂದಿದ್ದು, ಚುನಾವಣೆಯಲ್ಲಿ ಪ್ರಜೆಗಳು ತಮ್ಮ ಅಮೂಲ್ಯ ಮತ ಕಡ್ಡಾಯವಾಗಿ ಚಲಾಯಿಸಬೇಕು ಎಂದು ತಹಸೀಲ್ದಾರ್ ಪ್ರತಿಭಾ.ಆರ್. ಕರೆ ನೀಡಿದರು.

ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕುಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ಮತದಾನದ ಪ್ರಾಮುಖ್ಯತೆ ವಿವರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಕೀಲ ಶ್ರೀನಿವಾಸ ಉಪಾಧ್ಯ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಬಿಎಲ್‌ಒ ಮತ್ತು ವಿಒಎಗಳನ್ನು ಸನ್ಮಾನಿಸಲಾಯಿತು. ವೃತ್ತನಿರೀಕ್ಷಕಿ ಜಯಶ್ರೀ ಮಾನೆ, ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವ್ಕರ್, ಚುನಾವಣಾ ಶಿರಸ್ತೇದಾರ ಅಶೋಕ್ ಕೋಟೆಕಾರ್ ಉಪಸ್ಥಿತರಿದ್ದರು. ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net