More

    ಸ್ಫೋಟಿಸಿದ ಸೆಹ್ವಾಗ್, ಭಾರತ ಲೆಜೆಂಡ್ಸ್ ತಂಡಕ್ಕೆ ಸುಲಭ ತುತ್ತಾದ ಬಾಂಗ್ಲಾ

    ರಾಯ್‌ಪುರ (ಛತ್ತೀಸ್‌ಗಢ): ವೃತ್ತಿಜೀವನದುದ್ದಕ್ಕೂ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರಾಗಿದ್ದ ವೀರೇಂದ್ರ ಸೆಹ್ವಾಗ್ (80*ರನ್, 35 ಎಸೆತ, 10 ಬೌಂಡರಿ, 5 ಸಿಕ್ಸರ್) ಸಿಡಿಲಬ್ಬರದ ಬ್ಯಾಟಿಂಗ್, ದಿಗ್ಗಜ ಸಚಿನ್ ತೆಂಡುಲ್ಕರ್ (33*ರನ್, 26 ಎಸೆತ, 5 ಬೌಂಡರಿ) ಬಿರುಸಿನ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಭಾರತ ಲೆಜೆಂಡ್ಸ್ ತಂಡ ‘ರಸ್ತೆ ಸುರಕ್ಷಾ ವಿಶ್ವ ಸರಣಿ’ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಜಯ ದಾಖಲಿಸಿತು. ಶಹೀದ್ ವೀರನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್‌ಗಳಿಂದ ಬಾಂಗ್ಲಾದೇಶ ಲೆಜೆಂಡ್ಸ್ ತಂಡವನ್ನು ಮಣಿಸಿತು.

    ಇದನ್ನೂ ಓದಿ: ರಿಷಭ್ ಪಂತ್ ಶತಕದಾಟ, ಇಂಗ್ಲೆಂಡ್ ಎದುರು ಭಾರತಕ್ಕೆ ಇನಿಂಗ್ಸ್ ಮುನ್ನಡೆ 

    ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 19.4 ಓವರ್‌ಗಳಲ್ಲಿ 109 ರನ್‌ಗಳಿಗೆ ಸರ್ವಪತನ ಕಂಡಿತು. ಪ್ರತಿಯಾಗಿ ಭಾರತ ತಂಡ, ದಿಗ್ಗಜರ ಸ್ಫೋಟಕ ಬ್ಯಾಟಿಂಗ್ ಫಲವಾಗಿ 10.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 114 ರನ್‌ಗಳಿಸಿ ಜಯದ ನಗೆ ಬೀರಿತು.

    ಬಾಂಗ್ಲಾದೇಶ ಲೆಜೆಂಡ್ಸ್: 19.4 ಓವರ್‌ಗಳಲ್ಲಿ 109 (ನಜೀಮುದ್ದೀನ್ 49, ಜಾವೆದ್ ಓಮರ್ 12, ರಜೀನ್ ಷಾ 12, ವಿನಯ್ ಕುಮಾರ್ 25ಕ್ಕೆ 2, ಪ್ರಜ್ಞಾನ್ ಓಜಾ 12ಕ್ಕೆ 2, ಯುವರಾಜ್ ಸಿಂಗ್ 15ಕ್ಕೆ 2), ಭಾರತ ಲೆಜೆಂಡ್ಸ್: 10.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 114 (ವೀರೇಂದ್ರ ಸೆಹ್ವಾಗ್ 80*, ಸಚಿನ್ ತೆಂಡುಲ್ಕರ್ 33*).

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts