More

    ಸೋಮವಾರದ ಘರ್ಷಣೆ ವೇಳೆ ಭಾರತೀಯ ಯೋಧರ ಬಳಿ ಶಸ್ತ್ರಾಸ್ತ್ರಗಳಿದ್ದವು

    ನವದೆಹಲಿ: ಲಡಾಖ್​ನ ಪೂರ್ವಭಾಗದಲ್ಲಿ ಸೋಮವಾರ ನಡೆದ ಭಾರತ ಮತ್ತು ಚೀನಾ ಯೋಧರ ನಡುವಿನ ಘರ್ಷಣೆ ವೇಳೆ ಭಾರತೀಯ ಯೋಧರು ಶಸ್ತ್ರಾಸ್ತ್ರಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದರು. ಆದರೆ, ನಿಯಮದಂತೆ ಅವನ್ನು ಬಳಸಲಿಲ್ಲ ಎಂದು ವಿದೇಶಾಂಗ ಸಚಿವ ಎಸ್​. ಜೈಶಂಕರ್​ ಗುರುವಾರ ಸ್ಪಷ್ಟಪಡಿಸಿದ್ದಾರೆ.

    ಗುರುವಾರದ ಟ್ವೀಟ್​ನಲ್ಲಿ ಈ ವಿಷಯ ತಿಳಿಸಿರುವ ಅವರು, ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಯೋಧರು ಶಸ್ತ್ರಾಸ್ತ್ರಗಳನ್ನು ಹೊಂದಿರಲಿಲ್ಲ ಎಂಬ ವಿಷಯವಾಗಿ ಸ್ಪಷ್ಟನೆ ನೀಡಿದ್ದು, ಭಾರತೀಯ ಯೋಧರ ಬಳಿ ಶಸ್ತ್ರಾಸ್ತ್ರಗಳಿದ್ದವು. ಆದರೆ, 1996 ಮತ್ತು 2005ರ ಒಪ್ಪಂದದನ್ವಯ ಅವನ್ನು ಬಳಸಲಿಲ್ಲ ಎಂದು ಹೇಳಿದ್ದಾರೆ.

    ಲಡಾಖ್​ನಲ್ಲಿ ಶಸ್ತ್ರಾಸ್ತ್ರಗಳಿಲ್ಲದೆ ನಮ್ಮ ಯೋಧರನ್ನು ಕಳುಹಿಸಿ, ಅವರು ಹುತಾತ್ಮರಾಗಲು ಕಾರಣವಾಗಿದ್ದು ಏಕೆ ಎಂದು ಪ್ರತಿಪಕ್ಷ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಸರ್ಕಾರವನ್ನು ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಜೈಶಂಕರ್​ ಈ ಸ್ಪಷ್ಟನೆ ನೀಡಿದ್ದಾರೆ.

    ಭಾರತೀಯ ಯೋಧರ ಶವಗಳ ತಲೆಕಡಿದು ವಿಕೃತಿ, ಲಡಾಖ್​ನಲ್ಲಿ ಉದ್ವಿಗ್ನ ಪರಿಸ್ಥಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts