

ಬೆಂಗಳೂರು: ಲೆಬಬಾನ್ ರಾಜಧಾನಿ ಬೈರತ್ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಭಾರತೀಯ ಕ್ರೀಡಾಪಟುಗಳು ಕಂಬನಿ ಮಿಡಿದಿದ್ದಾರೆ. ಭೈರತ್ ನಗರದ ಸ್ಫೋಟದಿಂದಾಗಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 4 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭಾರತ ತಂಡದ ಆಟಗಾರ ದಿನೇಶ್ ಕಾರ್ತಿಕ್, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಬ್ಯಾಡ್ಮಿಂಟನ್ ಪಟು ಪಿವಿ ಸಿಂಧು ಸೇರಿದಂತೆ ಅನೇಕ ಕ್ರೀಡಾಪಟುಗಳು ಸಾಮಾಜಿಕ ಜಾಲತಾಣಗಳಲ್ಲಿ ಟನೆ ಕುರಿತು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ನೋಡಲು ಭಯವಾಗುತ್ತಿದೆ. ಎಷ್ಟು ಮಂದಿಗೆ ಗಾಯವಾಗಿದೆಯೋ, ಇಂಥ ಕಠಿಣ ಪರಿಸ್ಥಿತಿಯಲ್ಲಿ ಇಂಥ ಟನೆ ನಡೆಯಬಾರದಿತ್ತು. ಲೆಬನಾನ್ ದೇಶ ಹೇಗೆ ನಿಭಾಯಿಸುತ್ತದೆ ಎಂದು ಗೊತ್ತಿಲ್ಲ ಎಂದು ಟ್ವಿಟರ್ನಲ್ಲಿ ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ. ಅಮೆರಿಕ ರಾಜಕೀಯ ತಜ್ಞರೊಬ್ಬರ ವಿಡಿಯೋ ಶೇರ್ ಮಾಡಿದ್ದಾರೆ. ಅಲ್ಲದೆ, ವಿಶ್ವಚಾಂಪಿಯನ್ ಪಿವಿ ಸಿಂಧು ಘಟನೆ ಖಂಡಿಸಿ ಟ್ವೀಟ್ ಮಾಡಿದ್ದಾರೆ. .
ಘಟನಾ ಸ್ಥಳಗಳಲ್ಲಿ ರಣಾ ಕಾರ್ಯ ನಡೆಯುತ್ತಿದ್ದು, ಕರೊನಾ ಸಂಕಷ್ಟದ ಕಾಲದಲ್ಲಿ ಸಂಭವಿಸಿದ ಈ ದುರಂತಕ್ಕೆ ವಿಶ್ವದಾದ್ಯಂತ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.