More

    ಇಟಲಿಯಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ

    ನವದೆಹಲಿ: ಭಾರತೀಯ ವಿದ್ಯಾರ್ಥಿಯೊಬ್ಬ ಇಟಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಎಂಬಿಎ ವಿದ್ಯಾರ್ಥಿ ರಾಮ್ ರಾವುತ್ ಜ.2 ರಂದು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ.

    ಇದನ್ನೂ ಓದಿ: ಉಕ್ರೇನ್ ಮೇಲೆ ಮುಂದುವರೆದ ರಷ್ಯಾ ದಾಳಿ; 11 ಮಂದಿ ಸಾವು
    ಪೊಲೀಸರ ಪ್ರಕಾರ, ರಾವುತ್ ಎಂಬಿಎ ಓದಲು ಇಟಲಿಗೆ ತೆರಳಿದ್ದ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಹೊಸ ವರ್ಷದ ಶುಭಾಶಯ ತಿಳಿಸಲು ರಾವುತ್ ಪಾಲಕರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸಿಲ್ಲ. ನಂತರ ಪಾಲಕರು ಆತನ ವಸತಿಗೃಹದ ಮಾಲೀಕರನ್ನು ಸಂಪರ್ಕಿಸಿದರು. ಆಗ ಅವರು ಮತ್ತೊಂದು ಮನೆಯ ವಾಶ್ ರೂಂನಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.

    ರಾವುತ್​ ಸಾವಿನ ಸುದ್ದಿ ತಿಳಿದ ನಂತರ, ಅವರ ಕುಟುಂಬವು ಮೃತ ದೇಹವನ್ನು ಭಾರತಕ್ಕೆ ತರಲು ಜಾರ್ಖಂಡ್‌ನ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ಸಂಪರ್ಕಿಸಿದರು.

    ಘಟನೆಯ ಕುರಿತು ಮಾತನಾಡಿದ ಪಶ್ಚಿಮ ಸಿಂಗ್‌ಭೂಮ್‌ನ ಡೆಪ್ಯೂಟಿ ಕಮಿಷನರ್ ಅನನ್ಯ ಮಿತ್ತಲ್, ರಾಮ್ ರಾವುತ್ ಸಾವಿನ ಬಗ್ಗೆ ನನಗೆ ಮಾಹಿತಿ ಬಂದಿದೆ ಮತ್ತು ಅಗತ್ಯ ಕ್ರಮಕ್ಕಾಗಿ ಗೃಹ ಇಲಾಖೆ ಮತ್ತು ಜಾರ್ಖಂಡ್‌ನ ವಲಸೆ ಸೆಲ್‌ಗೆ ತಿಳಿಸಲಾಗಿದೆ ಎಂದು ಹೇಳಿದರು.
    ಪ್ರಕರಣದ ಎಲ್ಲಾ ಬೆಳವಣಿಗೆಗಳ ಮೇಲೆ ನಿಗಾ ಇಡುತ್ತಿದ್ದೇವೆ. ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮಿತ್ತಲ್ ಹೇಳಿದ್ದಾರೆ.

    ನನಗೆ ಏನೂ ಬೇಡ… ಜೈಲಿನಲ್ಲೇ ಸಾಯಲು ಬಿಡಿ: ಜೆಟ್ ಏರ್​ವೇಸ್ ಸಂಸ್ಥಾಪಕ ನರೇಶ್ ಗೋಯಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts