

ಹ್ಯಾಮಿಲ್ಟನ್: ಕೆನಾಡಾದ ಒಂಟಾರಿಯೊ ಪ್ರಾಂತ್ಯದ ಹ್ಯಾಮಿಲ್ಟನ್ ಪಟ್ಟಣದಲ್ಲಿ ನಡೆದ ಗ್ಯಾಂಗ್‌ಲ್ಯಾಂಡ್ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ದಾಳಿಯಲ್ಲಿ ವಿದ್ಯಾರ್ಥಿನಿಗೆ ಆಕಸ್ಮಿಕವಾಗಿ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಡೆದ ಘಟನೆ ಏನು?
ಏ.17 ಗುರುವಾರ ರಾತ್ರಿ ಹ್ಯಾಮಿಲ್ಟನ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಳ ಎದೆಗೆ ಗುಂಡು ತಗುಲಿದೆ. ತಕ್ಷಣ ಆಸ್ಪತ್ರೆಯ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಪೊಲೀಸರ ಪ್ರಕಾರ, ಕಪ್ಪು ಬಣ್ಣದ ಮರ್ಸಿಡಿಸ್ ಕಾರಿನ ಪ್ರಯಾಣಿಕನು ಬಿಳಿ ಸೆಡಾನ್ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯ ಸ್ವಲ್ಪ ಸಮಯದ ನಂತರ ಬಿಳಿ ಸೆಡಾನ್ ಕಾರು ಅಲ್ಲಿಂದ ಪರಾರಿಯಾಗಿದೆ. ವಿದ್ಯಾರ್ಥಿನಿ ಮೇಲಾದ ಗುಂಡಿನ ದಾಳಿಯು ಉದ್ದೇಶಿತ ದಾಳಿಯಲ್ಲ. ಈ ಘಟನೆಯ ಬಗ್ಗೆ ತನಿಖೆ ಪ್ರಾರಂಭವಾಗಿದೆ, ಆರೋಪಿಗಳನ್ನು ಹುಡುಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್)