More

    ಭಾರತೀಯ ವಿದ್ಯಾರ್ಥಿಗಳಿಗೆ ಫ್ರಾನ್ಸ್ ನೆರವು : ಮ್ಯಾಕ್ರನ್

    ನವದೆಹಲಿ: ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‍ನಲ್ಲಿ ವಿದ್ಯಾಭ್ಯಾಸ ಮಾಡಲು ಎಲ್ಲ ರೀತಿಯ ಅಗತ್ಯಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಪ್ರಕಟಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‍ನಲ್ಲಿ ಓದುವುದನ್ನು ಖಚಿತಪಡಿಸಿಕೊಳ್ಳುವ ಕ್ರಮಗಳನ್ನು ಪ್ರಕಟಿಸಿದರು.

    ಇದನ್ನೂ ಓದಿ: ಮೊದಲ ದಿನವೇ ‘ಫೈಟರ್’ಗೆ ಉತ್ತಮ ಪ್ರತಿಕ್ರಿಯೆ: ಬಾಕ್ಸ್‌ ಆಫೀಸ್‌ ಕಲೆಕ್ಷನ್​ ಎಷ್ಟು ಗೊತ್ತೇ?

    ಫ್ರಾನ್ಸ್ 2030 ರ ವೇಳೆಗೆ 30,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿ ಹೊಂದಿದೆ. ಈ ಮಹತ್ವಾಕಾಂಕ್ಷೆಯ ಗುರಿ ತಲುಪಲು ನಾವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಭಾರತೀಯ ವಿದ್ಯಾರ್ಥಿಗಳಿಗೆ ಹೇಗೆ ಸಹಾಯ ಮಾಡಬಹುದು ಎಂಬುದನ್ನು ವಿವರಿಸಿದ ಮ್ಯಾಕ್ರನ್, ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅಂತರರಾಷ್ಟ್ರೀಯ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

    ನಾವು ಫ್ರೆಂಚ್ ಕಲಿಯಲು ಹೊಸ ಕೇಂದ್ರಗಳೊಂದಿಗೆ ಅಲೈಯನ್ಸ್ ಫ್ರಾಂಚೈಸ್‍ಗಳ ನೆಟ್‍ವರ್ಕ್ ಅನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಅದೇ ರೀತಿ ಅಂತರರಾಷ್ಟ್ರೀಯ ತರಗತಿಗಳನ್ನು ನಡೆಸಲಾಗುತ್ತಿದೆ. ಇದು ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ನಮ್ಮ ವಿಶ್ವವಿದ್ಯಾಲಯಗಳಿಗೆ ಸೇರಲು ಅನುವು ಮಾಡಿಕೊಡುತ್ತದೆ ಎಂದು ಮ್ಯಾಕ್ರನ್ ಹೇಳಿದರು.

    ಫ್ರಾನ್ಸ್‍ನಲ್ಲಿ ಅಧ್ಯಯನ ಮಾಡಿದ ಯಾವುದೇ ಭಾರತೀಯ ವಿದ್ಯಾರ್ಥಿಗಳಿಗೆ ನಾವು ವೀಸಾ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತೇವೆ ಎಂದು ಫ್ರೆಂಚ್ ಅಧ್ಯಕ್ಷರು ತಿಳಿಸಿದ್ದಾರೆ.

    ಗಣರಾಜ್ಯೋತ್ಸವದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts