More

    ವೆಸ್ಟ್ ಇಂಡೀಸ್ ಸರಣಿಗೆ ಮರಳಿದ ಕ್ಯಾಪ್ಟನ್ ರೋಹಿತ್ ಶರ್ಮ

    ಮುಂಬೈ: ಆರಂಭಿಕ ಬ್ಯಾಟರ್ ರೋಹಿತ್ ಶರ್ಮ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್ ಸರಣಿಗೆ ಭಾರತ ತಂಡದ ನಾಯಕರಾಗಿ ಮರಳಿದ್ದಾರೆ. ಜತೆಗೆ ರಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಕೂಡ ಏಕದಿನ ಮತ್ತು ಟಿ20 ತಂಡಕ್ಕೆ ಪುನರಾಗಮನ ಕಂಡಿದ್ದರೆ, ಯುವ ಬೌಲರ್‌ಗಳಾದ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ವೇಗಿ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಿರುವ ಹೊಸಮುಖವಾಗಿದ್ದಾರೆ. 26 ವರ್ಷದ ದೀಪಕ್ ಹೂಡಾ ಏಕದಿನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬುಧವಾರ ಸಂಜೆ ಆಯ್ಕೆ ಸಮಿತಿ ಸಭೆಯಲ್ಲಿ 18 ಮಂದಿ ಸದಸ್ಯರ ತಂಡವನ್ನು ಅಂತಿಮಗೊಳಿಸಲಾಯಿತು. ವಿಂಡೀಸ್ ವಿರುದ್ಧದ 3 ಏಕದಿನ ಪಂದ್ಯಗಳು ಫೆಬ್ರವರಿ 6, 9 ಮತ್ತು 11ರಂದು ಅಹಮದಾಬಾದ್‌ನಲ್ಲಿ ನಡೆಯಲಿದ್ದರೆ, 3 ಟಿ20 ಪಂದ್ಯಗಳು ಫೆ. 16, 18 ಮತ್ತು 20ರಂದು ಕೋಲ್ಕತದಲ್ಲಿ ನಿಗದಿಯಾಗಿವೆ.

    ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಟಿ20 ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದರೂ, ಏಕದಿನ ತಂಡದಿಂದ ಕೊಕ್ ಪಡೆದಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಬಯಸದೆ ಎರಡೂ ಸರಣಿಗಳಲ್ಲಿ ಕಣಕ್ಕಿಳಿಯಲ್ಲಿದ್ದಾರೆ. ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಏಕದಿನ ಸರಣಿಯಿಂದ ಕೊಕ್ ನೀಡಿದ್ದು, ಟಿ20 ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಎರಡೂ ತಂಡಕ್ಕೂ ವಾಪಸಾಗಿದ್ದಾರೆ. ಕನ್ನಡಿಗ ಪ್ರಸಿದ್ಧ ಕೃಷ್ಣ ಏಕದಿನ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಸ್ಪಿನ್ನರ್ ಜಯಂತ್ ಯಾದವ್ ಅವರನ್ನು ಕೈಬಿಡಲಾಗಿದೆ.

    ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೀ), ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.

    ಟಿ20 ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂಗತ್, ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯಿ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮದ್ ಸಿರಾಜ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts