More

    ವಿಶ್ವಕಪ್​ನಲ್ಲಿ ಭಾರತಕ್ಕೆ ಸೋಲು: ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಸಿಎಂ ಹೇಳಿದ್ದೇನು?

    ನವದೆಹಲಿ: ಏಕದಿನ ವಿಶ್ವಕಪ್ ಕ್ರಿಕೆಟ್​ ಪಂದ್ಯಾವಳಿಯ ಫೈನಲ್​ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಇಂದು ನಡೆದಿದ್ದು, ಅಂತಿಮ ಹಣಾಹಣಿಯಲ್ಲಿ ಭಾರತ ಸೋತಿದ್ದು, ವಿಶ್ವಕಪ್ ಆಸ್ಟ್ರೇಲಿಯಾದ ಪಾಲಾಗಿದೆ.

    ಇನ್ನು ಭಾರತ ಸೋತರೂ ಭಾರತ ಇದಕ್ಕೂ ಹಿಂದಿನ ಹತ್ತೂ ಪಂದ್ಯದಲ್ಲಿ ಗೆದ್ದ ಹಿನ್ನೆಲೆಯಲ್ಲಿ ಹಲವರು ಸಂತೈಸುವಂಥ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾರಂಭಿಸಿದ್ದಾರೆ. ಪಂದ್ಯ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂತಾದವರು ಭಾರತ ತಂಡದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?

    ಪ್ರೀತಿಯ ಭಾರತ ತಂಡದವರೇ.. ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ಸಂಕಲ್ಪ ಗಮನ ಸೆಳೆಯಿತು. ನೀವು ಉತ್ತಮ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆ ತಂದಿದ್ದೀರಿ. ನಾವು ಇಂದು ಮತ್ತು ಎಂದೆಂದೂ ನಿಮ್ಮೊಂದಿಗೆ ಇರುತ್ತೇವೆ ಎಂದು ಮೋದಿ ಹೇಳಿದ್ದಾರೆ.

    ಟೀಮ್ ಇಂಡಿಯಾ.. ನೀವು ಪಂದ್ಯಾವಳಿಯಲ್ಲಿ ಉತ್ತಮವಾಗಿ ಆಡಿದ್ದೀರಿ. ಸೋಲು-ಗೆಲುವಿನಲ್ಲೂ ನಾವು ನಿಮ್ಮನ್ನು ಒಂದೇ ರೀತಿಯಲ್ಲಿ ಪ್ರೀತಿಸುತ್ತೇವೆ ಮತ್ತು ನಾವು ಮುಂದಿನ ಸಲ ಗೆಲ್ಲುತ್ತೇವೆ ಎಂದಿರುವ ರಾಹುಲ್ ಗಾಂಧಿ, ವಿಶ್ವಕಪ್ ಗೆಲುವಿಗಾಗಿ ಆಸ್ಟ್ರೇಲಿಯಾಕ್ಕೆ ಅಭಿನಂದನೆಗಳು ಎಂದೂ ತಿಳಿಸಿದ್ದಾರೆ.
    ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು.

    ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ. ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ವಿಶ್ವಕಪ್​ ಫೈನಲ್ ಪಂದ್ಯಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಕಪಿಲ್ ದೇವ್

    ದೀಪಾವಳಿಗೆ ಗಂಡ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಜಗಳ ಆಡುತ್ತ ಪ್ರಾಣ ಕಳ್ಕೊಂಡ್ಲು ಗರ್ಭಿಣಿ ಪತ್ನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts