More

    ಭಾರತ ಟೆಸ್ಟ್ ತಂಡದ ಉಪನಾಯಕತ್ವ ಸ್ಥಾನದಿಂದ ರಹಾನೆಗೆ ಕೊಕ್?

    ನವದೆಹಲಿ: ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ, ಭಾರತ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆಗಳಿದ್ದರೂ ಉಪನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಬುಧವಾರ 20 ಸದಸ್ಯರ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಜನವರಿ 19 ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ ತಂಡದ ಆಯ್ಕೆ ತಡವಾಗಲಿದೆ ಎಂದು ತಿಳಿದು ಬಂದಿದೆ. ಮುಂಬೈನಲ್ಲಿ ನ್ಯೂಜಿಲೆಂಡ್ ಎದುರು ನಡೆದ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಗಾಯದ ಸಮಸ್ಯೆ ಎಂದು ಹೇಳಲಾಗಿದ್ದರೂ ಸತತ 12 ಇನಿಂಗ್ಸ್‌ಗಳಲ್ಲಿ ರಹಾನೆ ವೈಫಲ್ಯಗೊಂಡಿದ್ದರು.

    ರಹಾನೆ ಉಪನಾಯಕತ್ವ ಕಳೆದುಕೊಂಡರೆ, ಮುಂಬೈನವರೇ ಆದ ರೋಹಿತ್ ಶರ್ಮ ಅವರಿಗೆ ಈ ಸ್ಥಾನ ಒಲಿಯುವ ಸಾಧ್ಯತೆಗಳಿವೆ. 100 ಟೆಸ್ಟ್ ಪಂದ್ಯಗಳನ್ನಾಡಿದ್ದರೂ ನಿರೀಕ್ಷಿತ ನಿರ್ವಹಣೆ ತೋರಲು ವಿಫಲವಾಗುತ್ತಿರುವ ಇಶಾಂತ್ ಶರ್ಮ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಕನ್ನಡಿಗ ಪ್ರಸಿದ್ಧ ಕೃಷ್ಣ, ಆವೇಶ್ ಖಾನ್, ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಹನುಮ ವಿಹಾರಿ ತಂಡಕ್ಕೆ ವಾಪಸಾಗುವ ಸಾಧ್ಯತೆಗಳಿದ್ದು, ಪ್ರಿಯಾಂಕ್ ಪಾಂಚಾಲ್ ಅಥವಾ ಅಭಿಮನ್ಯು ಈಶ್ವರನ್ ಮೂರನೇ ಕ್ರಮಾಂಕಕ್ಕೆ ಬದಲಿ ಆಟಗಾರರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts