More

    ಡಿಜಿಟಲ್ ಆರೋಗ್ಯ ಕ್ಷೇತ್ರದಲ್ಲಿ ಭಾರತ ಮಹತ್ತರ ಸಾಧನೆ: ವಿಜ್ಞಾನಿ ಡಾ. ಆಶೂ ಗ್ರೋವರ್ ಮಾಹಿತಿ

    ಮೈಸೂರು: ಭಾರತ ಡಿಜಿಟಲ್ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಸಾಧಿಸಿದ್ದು, ತಂತ್ರಜ್ಞಾನದ ಬಳಕೆ ಹೆಚ್ಚಿದೆ. ವಿದ್ಯಾರ್ಥಿಗಳು ಈ ಬಗ್ಗೆ ಗಮನ ನೀಡಬೇಕು ಎಂದು ದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್ (ಐಸಿಎಂಆರ್) ವಿಜ್ಞಾನಿ ಡಾ. ಆಶೂ ಗ್ರೋವರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
    ಜೆಎಸ್‌ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ಜೆಎಸ್‌ಎಸ್ ಆಸ್ಪತ್ರೆಯ ಶ್ರಿರಾಜೇಂದ್ರ ಶತಮಾನೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪದವಿ ದಿನಾಚರಣೆ ಕಾರ್ಯಕ್ರಮದಲ್ಲಿ ನೂತನ ಪದವೀಧರರಿಗೆ ಪ್ರಮಾಣಪತ್ರ ಪ್ರದಾನ ಮಾಡಿ ಅವರು ಮಾತನಾಡಿದರು.
    ಡಿಟಜಿಲ್ ಇಂದು ಎಲ್ಲ ರಂಗಗಳಲ್ಲಿಯೂ ಪ್ರಾಧಾನ್ಯತೆ ಪಡೆದುಕೊಳ್ಳುತ್ತಿದೆ. ಭಾರತ ಕೂಡಾ ಡಿಜಿಟಲ್ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಸಾಧಿಸಿದ್ದು, ತಂತ್ರಜ್ಞಾನದ ಬಳಕೆ ಹೆಚ್ಚಿದೆ. ಇದಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಳ್ಳುವುದನ್ನು ರೂಢಿಸಿಕೊಂಡರೆ ವೃತ್ತಿಯಲ್ಲಿ ಪ್ರಗತಿ ಸಾಧಿಸಿ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿ ಆಗುತ್ತದೆ ಎಂದರು.
    ಆರೋಗ್ಯ ಕ್ಷೇತ್ರದಲ್ಲಿ ಶ್ರವಣ ವೈದ್ಯರಿಗೆ ಹೆಚ್ಚು ಬೇಡಿಕೆ ಇದ್ದು, ಕಿವಿ ಕೇಳಿಸದವರಿಗೆ, ಧ್ವನಿ ಇಲ್ಲದವರಿಗೆ ಧ್ಬನಿ ನೀಡುವ ಅವಕಾಶ ನಿಮಗೆ ಇದೆ. ಸ್ಪೀಚ್ ಥೆರೆಪಿಸ್ಟ್ ಅಂತಹ ಸೇವೆಗಳು ಜಾಗತಿಕವಾಗಿಯೂ ಅಗತ್ಯವಿದೆ. ಉತ್ತಮ ವೇತನವೂ ಸಿಗಲಿದ್ದು, ಖಾಸಗಿ ಸಂಸ್ಥೆಗಳ ಮೂಲಕವೂ ಈ ಸೇವೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.
    ವಾಕ್ ಮತ್ತು ಶ್ರವಣ ಕ್ಷೇತ್ರದಲ್ಲಿ ಸಂಶೋಧನೆ ಮಾಡುವವರಿಗೆ ಐಸಿಎಂಆರ್‌ನಂತಹ ಸಂಸ್ಥೆಗಳಲ್ಲಿ ಮುಕ್ತ ಅವಕಾಶ ಇದೆ. ಪದವೀಧರರು ಈ ಬಗ್ಗೆಯೂ ಗಮನ ನೀಡಬೇಕು. ಪಿಎಚ್.ಡಿಗೂ ಆದ್ಯತೆ ನೀಡಿ. ವಿಶೇಷವಾಗಿ ಸ್ತ್ರೀಯರು ಕುಟುಂಬ ಹಾಗೂ ವೃತ್ತಿಯ ನಡುವೆ ಸಮತೋಲನ ಕಾಯ್ದುಕೊಂಡು ಸಾಧನೆ ತೋರಬೇಕು ಎಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ 26 ಪದವೀಧರರು, 19 ಸ್ನಾತಕೋತ್ತರ ಪದವೀಧರರೂ ಸೇರಿದಂತೆ ಒಟ್ಟು 55 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವ ಬಸಪ್ಪ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ.ಜಿ. ಬೆಟಸೂರಮಠ, ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್. ಮಹೇಶ್, ವಾಕ್ ಮತ್ತು ಶ್ರವಣ ಸಂಸ್ಥೆ ಪ್ರಾಂಶುಪಾಲರಾದ ಆರ್. ಸುಮಾ, ವಾಕ್ ಮತ್ತು ಭಾಷಾ ವಿಭಾಗದ ಮುಖ್ಯಸ್ಥ ಎಸ್.ವಿ. ನರಸಿಂಹನ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts