More

    ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರ ಭಾರತ: ಪ್ರಧಾನಿ ಮೋದಿ

    ಗಾಂಧಿನಗರ: ಅತಿ ಹೆಚ್ಚು ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲೇ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಎರಡು ದಿನಗಳ ಕಾಲ ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಜಾಮ್​ನಗರದ ನೂತನ ಬನಾಸ್​ ಡೈರಿಯನ್ನು ಉದ್ಘಾಟಿಸಿ ಮಾತನಾಡಿದರು.

    ಭಾರತ ವಾರ್ಷಿಕ 8.5 ಲಕ್ಷ ಕೋಟಿ ಮೌಲ್ಯದ ಹಾಲು ಉತ್ಪಾದಿಸಲಿದ್ದು, ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದೆ ಎಂದರು.

    ರಾಷ್ಟ್ರದಲ್ಲಿ ಗೋಧಿ ಹಾಗೂ ಅಕ್ಕಿ ಉತ್ಪಾದನೆಗಿಂತ ಹಾಲು ಉತ್ಪಾದನೆಯೇ ಹೆಚ್ಚಿದ್ದು,ರೈತರ ಅಭಿವೃದ್ಧಿ ಉತ್ತೇಜಿಸುವ ನಿಟ್ಟಿನಲ್ಲಿ ಆಲೂಗಡ್ಡೆ ಸಂಸ್ಕರಣಾ ಘಟಕ ನಿರ್ಮಾಣಕ್ಕೂ ಚಾಲನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts