More

    ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ…

    ನವದೆಹಲಿ: ನೂತನ ಸಂಸತ್​ ಭವನ ಉದ್ಘಾಟನಾ ಗುರುತಾಗಿ ಪ್ರಧಾನಿ ಮೋದಿ ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ಸರ್ವಧರ್ಮ ಪಾರ್ಥನೆಯು ಕಾರ್ಯಕ್ರಮದಲ್ಲಿ ವಿಶೇಷ ಗಮನ ಸೆಳೆಯಿತು. ಹೊಸ ಸಂಸತ್​ ಭವನ ಉದ್ಘಟನಾ ಕಾರ್ಯಕ್ರಮ ಬೆಳಗ್ಗೆ 7.30 ರಿಂದ ಆರಂಭವಾಯಿತು. ಐತಿಹಾಸಿ ಸೆಂಗೋಲ್​ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್​ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿದ್ದಾರೆ. ಪೂಜಾ-ವಿಧಿವಿಧಾನಗಳ ಜತೆಗೆ, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.

    ಭಾರತದ ಸಂಸತ್ತಿನ ಹೊಸ ಕಟ್ಟಡವು ಉದ್ಘಾಟನೆಗೊಳ್ಳುತ್ತಿದ್ದಂತೆ, ನಮ್ಮ ಹೃದಯ, ಮನಸ್ಸು ಹೆಮ್ಮೆ, ಭರವಸೆ ಮತ್ತು ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಿರಲಿ, ಕನಸುಗಳನ್ನು ಹೊತ್ತಿಸಿ ಅವುಗಳನ್ನು ವಾಸ್ತವಕ್ಕೆ ಪೋಷಿಸುತ್ತದೆ. ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ನೂತನ ಸಂಸತ್ ಭವನದ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

    ಕಾರ್ಯಕ್ರಮಕ್ಕೆ ಸುಮಾರು 60 ಧಾರ್ಮಿಕ ಮುಖ್ಯಸ್ಥರನ್ನು ಕರೆಸಲಾಗಿದ್ದು, ಅವರಲ್ಲಿ ಹಲವರು ತಮಿಳುನಾಡಿನವರಾಗಿದ್ದಾರೆ. ಧಾರ್ವಿುಕ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಋತ್ವಿಜರಾದ ಟಿ.ವಿ. ಸೀತಾರಾಮ ಶರ್ಮ, ಶ್ರೀರಾಮ ಶರ್ಮ, ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ ಭಾಗಿಯಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts