ತವರಿನಲ್ಲಿ ಟೀಮ್​ ಇಂಡಿಯಾಗೆ ಭಾರೀ ಮುಖಭಂಗ; ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ NewZealand

NewZealand
Published on

ಪುಣೆ: ಮಹಾರಾಷ್ಟ್ರ ಕ್ರಿಕೆಟ್​ ಅಸೋಸಿಯೇಷನ್​ ಕ್ರೀಡಾಂಗಣದಲ್ಲಿ ನಡೆದೆ ಭಾರತ (Team India)  ಹಾಗೂ ನ್ಯೂಜಿಲೆಂಡ್​ (NewZealand) ನಡುವಿನ ಟೆಸ್ಟ್​ ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ತಂಡವು (NewZealand) 113 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಆತಿಥೇಯರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್​ ಹಾಕಿದೆ.

ಎರಡನೇ ಟೆಸ್ಟ್ ಪಂದ್ಯವನ್ನು 113 ರನ್​ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ (NewZealand) ತಂಡ ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಾಖಲೆ ನಿರ್ಮಿಸಿದೆ. 1955ರಿಂದ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಮಾಡುತ್ತಿರುವ ನ್ಯೂಜಿಲೆಂಡ್ (NewZealand) ತಂಡ, ಇದುವರೆಗೆ ಭಾರತದ ನೆಲದಲ್ಲಿ ಈ ಸರಣಿಯನ್ನು ಹೊರತುಪಡಿಸಿ 12 ಟೆಸ್ಟ್ ಸರಣಿಗಳನ್ನು ಆಡಿತ್ತು. ಆದರೆ, ಎಲ್ಲಾ ಸರಣಿಗಳು ಟೀಮ್​ ಇಂಡಿಯಾ ತನ್ನ ಮೇಲುಗೈ ಸಾಧಿಸಿತ್ತು. ಇದೀಗ ತವರಿನಲ್ಲಿ 4331 ದಿನಗಳ ಬಳಿಕ ಸರಣಿ ಸೋಲುವ ಮೂಲಕ ಟೀಮ್​ ಇಂಡಿಯಾ (Team India) ಭಾರೀ ಮುಖಭಂಗವನ್ನು ಅನುಭವಿಸಿದೆ.

ಈ ಮೊದಲು ಬೆಂಗಳೂರಿನಲ್ಲಿ ನಡೆದ ಟೆಸ್ಟ್ ಪಂದ್ಯವನ್ನು 8 ವಿಕೆಟ್​ಗಳಿಂದ ಗೆದ್ದುಕೊಂಡಿದ್ದ ಕಿವೀಸ್ (NewZealand) ತಂಡ, ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ಸುಲಭವಾಗಿ ಗೆದ್ದು ಭಾರತದ ನೆಲದಲ್ಲಿ ಇತಿಹಾಸ ನಿರ್ಮಿಸಿದೆ. ಇತ್ತ ಈ ಸೋಲಿನೊಂದಿಗೆ ತವರಿನಲ್ಲಿ ಟೀಮ್​ ಇಂಡಿಯಾದ ಅಜೇಯ ಟೆಸ್ಟ್ ಸರಣಿಯ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.

ಬ್ಯಾಟ್ಸ್​ಮನ್​ಗಳ ಪೆವಿಲಿಯನ್​ ಪೆರೇಡ್​ 

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡ ನ್ಯೂಜಿಲೆಂಡ್​ (NewZealand) ತಂಡವು ವಾಷಿಂಗ್ಟನ್​ ಸುಂದರ್​. ಆರ್​. ಅಶ್ವಿನ್​ ಆಫ್​ಸ್ಪಿನ್​​ ದಾಳಿಗೆ ನಲುಗಿ 259 ರನ್​ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್​ ಮಾಡಿದ ಟೀಮ್​ ಇಂಡಿಯಾ (Team India) 156 ರನ್‌ಗಳಿಗೆ ಆಲೌಟ್ ಆಗಿತ್ತು.  103 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ನ್ಯೂಜಿಲೆಂಡ್​ ತಂಡವು ನಾಯಕ ಟಾಮ್​ ಲಾಥಮ್​ (86 ರನ್​, 133 ಎಸೆತ, 10 ಬೌಂಡರಿ) ದಿಟ್ಟ ಬ್ಯಾಟಿಂಗ್​ ಫಲವಾಗಿ 255 ರನ್​ಗಳಿಗೆ ಆಲೌಟ್ ಆಗುವ ಮೂಲಕ ಭಾರತಕ್ಕೆ 359 ರನ್​ಗಳ ಗುರಿ ನೀಡಿತು.

ಗುರಿ ಬೆನ್ನತ್ತಿದ್ದ ಭಾರತ ತಂಡವನ್ನು ಇನ್ನಿಲ್ಲದಂತೆ ಕಾಡಿದ ಕಿವೀಸ್​ ಬೌಲರ್​​ಗಳು (NewZealand) ಪೆವಿಲಿಯನ್​ ದಾರಿ ತೋರಿಸಿದರು. ಮೊದಲ ಇನ್ನಿಂಗ್ಸ್​ನಂತೆ ಎರಡನೇ ಇನ್ನಿಂಗ್ಸ್​ನಲ್ಲೂ ಬ್ಯಾಟ್ಸ್​ಮನ್​ಗಳು ಕೈಕೊಟ್ಟ ಪರಿಣಾಮ ಟೀಮ್​ ಇಂಡಿಯಾ ಸೋಲಿಗೆ ಕೊರಳೊಡ್ಡಬೇಕಾಯಿತು. ತಂಡದ ಪರ ರವೀಂದ್​ ಜಡೇಜಾ 42 ರನ್​ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್​ಮನ್​ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ.

ಸ್ಯಾಂಟ್ನರ್​ ಮಿಂಚು 

ನ್ಯೂಜಿಲೆಂಡ್ ಪರ ಎರಡನೇ ಇನ್ನಿಂಗ್ಸ್‌ನಲ್ಲೂ ಮಾರಕ ಬೌಲಿಂಗ್ ಪ್ರದರ್ಶಿಸಿದ ಮಿಚೆಲ್ ಸ್ಯಾಂಟ್ನರ್ ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡರು.  ಮೊದಲ ಇನ್ನಿಂಗ್ಸ್​ನಲ್ಲಿ ಪ್ರಮುಖ 7 ವಿಕೆಟ್ ಉರುಳಿಸಿದ್ದ ಸ್ಯಾಂಟ್ನರ್, ಎರಡನೇ ಇನ್ನಿಂಗ್ಸ್​ನಲ್ಲೂ 6 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಕಿವೀಸ್ ತಂಡ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಭಾರತದಲ್ಲಿ ಚೊಚ್ಚಲ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net