More

    ಪ್ರಧಾನಿ ಮೋದಿಯಿಂದ ವಿಕಸಿತ ಭಾರತದ ಸಂಕಲ್ಪ

    ಚಿಕ್ಕಮಗಳೂರು: ಮುಂದಿನ 25 ವರ್ಷಗಳಲ್ಲಿ ಭಾರತ ಹೇಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಒಂದು ಪರಿಕಲ್ಪನೆಯ ಸಂಕಲ್ಪ ಮಾಡಿದ್ದಾರೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಹೇಳಿದರು.
    ಪ್ರೆಸ್‌ಕ್ಲನ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ಪರಿಕಲ್ಪನೆ ಅಂಗವಾಗಿ ದೇಶಾದ್ಯಂತ ಜಿಲ್ಲೆಗಳ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಪಂ, ಹಳ್ಳಿಗಳು ಮತ್ತು ಎಲ್ಲ ಮಂಡಲಗಳಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಕಳಿಸಲು ತೀರ್ಮಾನಿಸಲಾಗಿದೆ ಎಂದರು.
    ಪ್ರಸ್ತುತ ರೈತರು ಎದುರಿಸುತ್ತಿರುವ ಸಮಸ್ಯೆ-ಸವಾಲುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಲು ವಿಕಸಿತ ಭಾರತ ಅಭಿಯಾನ ಆಯೋಜಿಸಲಾಗಿದೆ. ವಿದ್ಯಾರ್ಥಿ ನಿಧಿಗೆ ಕೇಂದ್ರ ಸರ್ಕಾರ 1ಕೋಟಿ ರೂ.ನೀಡಿದೆ. ಕಾಫಿ ಮಂಡಳಿ, ಕೆನರಾ ಬ್ಯಾಂಕ್ ಸಹಯೋಗದಲ್ಲಿ ಕಾಫಿ ಬೆಳೆಗಾರರು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಸಾಮಾಜಿಕ ಭದ್ರತಾ ಯೋಜನೆ ಜಾರಿಗೆ ತಂದಿದೆ ಎಂದು ವಿವರಿಸಿದರು.
    ಮಣ್ಣು ಪರೀಕ್ಷೆ ಮಾಡಿ ರಸಗೊಬ್ಬರ, ಸುಣ್ಣ ಮತ್ತಿತರ ಸಾವಯವ ಗೊಬ್ಬರವನ್ನು ಹಾಕುವ ಕುರಿತು ನೂತನ ತಂತ್ರಜ್ಞಾನದ ಕುರಿತು ಏಪ್ರಿಲ್ 3 ರಂದು ಕಾಫಿ ಮಂಡಳಿ ಸಂಶೋಧನಾ ಕೇಂದ್ರದಲ್ಲಿ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ತಿಳಿಸಿದರು.
    ಬಿಜೆಪಿ ವಕ್ತಾರ ಸಿ.ಎಚ್ ಲೋಕೇಶ್ ಮಾತನಾಡಿ, ಬಿಜೆಪಿ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷ ಸೇರಲು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ ಅವರೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾದರೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಪುಷ್ಪರಾಜ್, ಬಿ.ರಾಜಪ್ಪ, ಮನು ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts