More

    ಕೇರಳದಲ್ಲಿ ಎರಡನೇ ಕೊರೊನಾ ಪ್ರಕರಣ ಪತ್ತೆ: ಚೀನಾದಿಂದ ಬಂದಿರುವ ರೋಗಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

    ತಿರುವನಂತಪುರ: ಚೀನಾದಲ್ಲಿ ನೂರಾರು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ಕೊರೊನಾ ವೈರಸ್​ ಭಾರತಕ್ಕೂ ಕಾಲಿಟ್ಟಿದ್ದು, ಕೇರಳದಲ್ಲಿ ಎರಡನೇ ಪ್ರಕರಣ ದಾಖಲಾಗಿದೆ.

    ಮೂರು ದಿನಗಳ ಹಿಂದೆ ಕೇರಳದಲ್ಲಿ ವಿದ್ಯಾರ್ಥಿಯೊಬ್ಬನಲ್ಲಿ ಕೊರೊನಾ ವೈರಸ್​ ಇರುವುದು ಪತ್ತೆಯಾಗಿತ್ತು. ಆ ವಿದ್ಯಾರ್ಥಿ ಚೀನಾದಿಂದ ಭಾರತಕ್ಕೆ ಬಂದಿದ್ದಾಗಿ ತಿಳಿಸಲಾಗಿತ್ತು. ಇದೀಗ ಎರಡನೇ ಪ್ರಕರಣ ಬೆಳಕಿಗೆ ಬಂದಿದೆ. ವೈರಸ್​ ಹೊಂದಿರುವ ವ್ಯಕ್ತಿಯು ಚೀನಾದ ಪ್ರವಾಸ ಮುಗಿಸಿ ಭಾರತಕ್ಕೆ ಬಂದಿದ್ದರು ಎನ್ನಲಾಗಿದೆ. ಸದ್ಯ ರೋಗಿಯನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನಡೆಸಲಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

    ಕೇರಳದಲ್ಲಿ ಮೊದಲ ಕೊರೊನಾ ವೈರಸ್​ ಪತ್ತೆಯಾದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರು ಜನರನ್ನು ವೈರಸ್​ ಪೀಡಿತರು ಎಂದು ಶಂಕಿಸಿ ವೈದ್ಯಕೀಯ ಪರೀಕ್ಷೆಗೆ ಗುರಿ ಪಡಿಸಲಾಗಿತ್ತು. ನಿನ್ನೆ ಮತ್ತಿಬ್ಬರಲ್ಲಿ ವೈರಸ್​ನ ಗುಣಲಕ್ಷಣಗಳು ಕಂಡು ಬಂದಿದ್ದು, ಎಂಟೂ ಜನರನ್ನು ವೈದ್ಯಕೀಯ ಪರೀಕ್ಷೆಯಲ್ಲಿಡಲಾಗಿದೆ.

    ಚೀನಾದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಪ್ರಕರಣಗಳು ಸಾಲು ಸಾಲಾಗಿ ಬೆಳಕಿಗೆ ಬರುತ್ತಿದ್ದು, 304 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. 14,000ಕ್ಕೂ ಹೆಚ್ಚು ಜನರಲ್ಲಿ ವೈರಸ್​ ಇರಬಹುದು ಎಂದು ಶಂಕಿಸಲಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts