More

    ದೋಷಾರೋಪ ಪಟ್ಟಿ ಸಲ್ಲಿಕೆ ಸರಿ ಇರಲಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ತಾಕೀತು

    ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳು ನ್ಯಾಯಾಲಯದಲ್ಲಿ ಖುಲಾಸೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು.

    ಡಿಸಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸಿ ದೋಷಾರೋಪ ಪಟ್ಟಿಯನ್ನು ವ್ಯವಸ್ಥಿತವಾಗಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದರೆ ತಪ್ಪಿತಸ್ಥರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

    ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ, ಸಕಾಲದಲ್ಲಿ ಪರಿಹಾರ, ಪುನರ್ವಸತಿ ಸಹಿತ ಸರ್ಕಾರದ ಸೌಲಭ್ಯಗಳನ್ನು ಸಂತ್ರಸ್ಥರಿಗೆ ತಲುಪಿಸಬೇಕೆಂದು ತಾಕೀತು ಮಾಡಿದರು.

    ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಮತಾ ಮಾತನಾಡಿ, 2021ನೇ ಸಾಲಿನಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ 2021ರ ಆಗಸ್ಟ್ 1ರಿಂದ ನವೆಂಬರ್ 30ರ ವರೆಗೆ 26 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಇವುಗಳಿಗೆ ಸಂಬಂಧಿಸಿದಂತೆ 16.75 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

    ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ 2021ರ ಜನವರಿ 1ರಿಂದ ನವೆಂಬರ್ 30ರ ವರೆಗೆ 72 ಪ್ರಕರಣಗಳು ಬಾಕಿ ಇವೆ. ನವೆಂಬರ್‌ನಲ್ಲಿ 4 ಪ್ರಕರಣಗಳು ದಾಖಲಾಗಿದ್ದು, ಐದು ಪ್ರಕರಣವನ್ನು ವಿಲೇ ಮಾಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts