More

    ಸ್ವಾತಂತ್ರ್ಯ ಅಮೃತ ಮಹೋತ್ಸವ ಅದ್ದೂರಿಗೆ ಸಹಕರಿಸಿ, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮನವಿ

    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಈ ಬಾರಿ ಸ್ವಾತಂತ್ರ್ಯ ದಿನವನ್ನು ತಾಲೂಕಿನಲ್ಲಿ ವಿಜೃಂಭಣೆಯಿಂದ ಆಚರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.


    ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಕುರಿತು ಮಂಗಳವಾರ ಕರೆದಿದ್ದ ತಾಲೂಕುಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 3 ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ಸ್ವಾತಂತ್ರ್ಯ ದಿನದಲ್ಲಿ ವಿದ್ಯಾರ್ಥಿಗಳ ಜತೆಗೆ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರಿಯ ಹಬ್ಬಕ್ಕೆ ಗೌರವ ಸಲ್ಲಿಸಬೇಕು ಎಂದರು.


    ಪ್ರತಿ ಇಲಾಖೆಯ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಅಧಿಕಾರಿಗಳು ಸ್ವಯಂ ಪ್ರೇರಿತರಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕು ಎಂದರು.

    ಪ್ಲಾಸ್ಟಿಕ್ ಧ್ವಜ ನಿಷೇಧ: ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟಕ್ಕೆ ಅವಕಾಶ ನೀಡಬಾರದು. ನಿಯಮ ಉಲ್ಲಂಸಿದವರ ಮೇಲೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮ ಆಯೋಜಿಸುವ ಕ್ರೀಡಾಂಗಣವನ್ನು ಸ್ವಚ್ಛ ಮಾಡಬೇಕು. ಈ ಸಂಭ್ರಮದ ಆಚರಣೆಗೆ ಪ್ರತಿಯೊಬ್ಬರ ಸಹಕಾರ ಮುಖ್ಯ ಎಂದು ಶಾಸಕರು ತಿಳಿಸಿದರು.


    ತಹಸೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದು, ಪಥಸಂಚಲನ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆಯಿಂದ ಮಾಡಲಾಗುತ್ತಿದೆ. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.


    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ, ಸಮಸ್ವಯಾಧಿಕಾರಿ ಶಿವಕುಮಾರ್, ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರಾಮಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಾಣಿ, ಸಿಡಿಪಿಒ ಲತಾ, ರಾಜಸ್ವ ನಿರೀಕ್ಷಕ ಸುದೀಪ್, ಅಶ್ವತ್ಥ್ ಮತ್ತಿತರರು ಉಪಸ್ಥಿತರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts