More

    ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ-ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗರಂ

    ಶಿವಮೊಗ್ಗ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಸೋಮವಾರ ನಗರದ ಖಾಸಗಿ ಬನ್ ನಿಲ್ದಾಣದ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಬಳಿಕ ಊಟ ಸೇವಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡುವವರು ಸಂಖ್ಯೆ ಕುಸಿದಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷೃವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವ್ಯವಸ್ಥೆಯ ಗೂಡಾಗಿರುವ ಇಂದಿರಾ ಕ್ಯಾಂಟೀನ್‌ಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಆತಂಕ ವ್ಯಕ್ತಪಡಿಸಿದರು.
    ಸಿದ್ಧರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಹಸಿವು ಮುಕ್ತ ಕರ್ನಾಟಕ ಘೋಷಣೆ ಮೂಲಕ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ತಿಂಡಿ ನೀಡುವುದು ಇದರ ಮುಖ್ಯ ಉದ್ಧೇಶವಾಗಿತ್ತು. ಈಗ ರಾಜ್ಯ ಸರ್ಕಾರದ ನಿರ್ಲಕ್ಷೃದಿಂದ ಕಳಪೆ ಆಹಾರ ಪೂರೈಕೆಯಾಗುತ್ತಿದೆ ಎಂದು ದೂರಿದರು.
    ಶಿವಮೊಗ್ಗ ಬಸ್ ನಿಲ್ದಾಣದ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಆರಂಭದ ದಿನಗಳಲ್ಲಿ 500 ಮಂದಿಗೆ ಊಟ ಒದಗಿಸುತ್ತಿತ್ತು. ಈಗ ದಿನಕ್ಕೆ 100 ಜನರೂ ಬರುತ್ತಿಲ್ಲ. ಸ್ಥಳೀಯ ಶಾಸಕರು ಇದನ್ನು ಗಂಭೀರವಾಗಿ ಪರಿಗಣಿಸಿ ಗುಣಮಟ್ಟದ ಆಹಾರ ಪೂರೈಕೆ ಮಾಡುವ ಮೂಲಕ ಬಡವರಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts