28.5 C
Bengaluru
Monday, January 20, 2020

ಹಾಲಿವುಡ್​ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಇಂದ್ರಜಿತ್​ ಲಂಕೇಶ್​; ಮುಂದಿನ ತಿಂಗಳು ಲಾಸ್​ ಏಂಜಲೀಸ್​ಗೆ ಪ್ರಯಾಣ​

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬೆಂಗಳೂರು: ಖ್ಯಾತ ಪತ್ರಕರ್ತರಾಗಿದ್ದ ಪಿ.ಲಂಕೇಶ್​ ಅವರ ಪುತ್ರ, ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಅವರು ಹಾಲಿವುಡ್​ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಇಂದ್ರಜಿತ್ ಲಂಕೇಶ್​ ಅವರು ಐಶ್ವರ್ಯಾ ಸಿನಿಮಾ ಮೂಲಕ ಬಾಲಿವುಡ್​ ನಟಿ ದೀಪಿಕಾ ಪಡುಕೋಣೆಯನ್ನು ಕನ್ನಡಕ್ಕೆ ಕರೆತಂದಿದ್ದರು. ಅಲ್ಲದೆ ಶಕೀಲಾ ಜೀವನಾಧಾರಿತ ಬಾಲಿವುಡ್​ ಸಿನಿಮಾವೊಂದನ್ನು ಕಳೆದ ವರ್ಷದಿಂದ ನಿರ್ದೇಶನ ಮಾಡುತ್ತಿದ್ದು. ಅದಿನ್ನೂ ಶೂಟಿಂಗ್​ ನಡೆಯುತ್ತಿದೆ. ಹೀಗಿರುವಾಗ ತಮ್ಮ 11ನೇ ಚಿತ್ರವಾಗಿ ಹಾಲಿವುಡ್​ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದಾರೆ. ಈ ಬಗ್ಗೆ ಅವರೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇದೊಂದು ಮುಸ್ಲಿಂ ಮಹಿಳೆ ಬಗೆಗಿನ ಸಿನಿಮಾ ಆಗಿದ್ದು ಮುಂದಿನ ತಿಂಗಳಿನಿಂದ ಪ್ರೀ-ಪ್ರೊಡಕ್ಷನ್​ ಶುರುವಾಗಲಿದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದ ನಟಿಯೋರ್ವರು ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಆದರೆ, ಅವರು ಯಾರು ಎಂಬುದನ್ನು ಈಗಲೇ ಬಹಿರಂಗಪಡಿಸುವುದಿಲ್ಲ. ಅದನ್ನೂ ಸಹ ಮುಂದಿನ ತಿಂಗಳೇ ಹೇಳಲಾಗುವುದು ಎಂದು ಇಂದ್ರಜಿತ್​ ಲಂಕೇಶ್​ ತಿಳಿಸಿದ್ದಾರೆ.

ಇದು ನೈಜ ಘಟನೆಯಾಧಾರಿತ ಚಿತ್ರವಾಗಿದ್ದು ಬರುವ ತಿಂಗಳು ಇಂದ್ರಜಿತ್ ಲಂಕೇಶ್​ ಅವರು ಲಾಸ್​ ಏಂಜಲೀಸ್​ಗೆ ತೆರಳಲಿದ್ದಾರೆ. ಹಾಗೇ, ಹಾಲಿವುಡ್​ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿರುವ ಕನ್ನಡದ ಪ್ರಥಮ ನಿರ್ದೇಶಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ ಇಂದ್ರಜಿತ್ ಲಂಕೇಶ್​ ಅವರು ಕನ್ನಡ ಚಾನೆಲ್​ವೊಂದರಲ್ಲಿ ಪ್ರಸಾರವಾಗುತ್ತಿರುವ ಕಾಮಿಡಿ ಶೋ ಮಜಾ ಟಾಕೀಸ್​ನಲ್ಲಿ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...