

ಉಡುಪಿ: ಕೇಂದ್ರದಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಮಲ್ಪೆ&ತೀರ್ಥಹಳ್ಳಿ ಚತುಷ್ಪಥ ಕಾಮಗಾರಿಗೆ ಅನುಮೋದನೆ ಲಭಿಸಿದ್ದು, ಕೆಲಸ ಪ್ರಾರಂಭವಾಗಿ 8 ವರ್ಷ ಕಳೆದರೂ ರೈಲ್ವೇ ಮೇಲ್ಸುತುವೆ ನಿರ್ಮಾಣ ಸಾಧ್ಯವಾಗಿಲ್ಲ. ಹೆದ್ದಾರಿ ಇಲಾಖೆ ಮತ್ತು ರೈಲ್ವೇ ಇಲಾಖೆ ಮಧ್ಯೆ ಸಮನ್ವಯದ ಕೊರತೆಯಿಂದ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಸಂಸ್ಥೆಗಳ ಸಹಯೋಗದೊಂದಿಗೆ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಎಪ್ರಿಲ್ ುಲ್ ದಿನಾಚರಣೆಯೊಂದಿಗೆ ನಡೆದ ವಿಶಿಷ್ಟ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ಲಾನಿಂಗ್ ಮಾಡಿದ್ದೇ ಸರಿಯಿಲ್ಲ
ಇಂದ್ರಾಳಿಯಲ್ಲಿ ಗರ್ಡರ್ ಅಳವಡಿಸುವ ಅಗತ್ಯವಿರಲಿಲ್ಲ. ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಅವಕಾಶಗಳಿವೆ. ಕಲ್ಯಾಣಪುರ&ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿಯೂ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಇಲ್ಲಿ ್ಲೆ$ಓವರ್ ಮಾಡಿದ್ದರೆ ಬಹಳಷ್ಟು ಬೇಗದಲ್ಲಿ ಕಾಮಗಾರಿ ಮುಗಿಸಬಹುದಿತ್ತು. ಎರಡೂ ಕಡೆಗಳಿಲ್ಲ ಸರಿಯಾಗಿ ಪ್ಲಾನಿಂಗ್ ಮಾಡದೆ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕಾಮಗಾರಿ ವಿಳಂಬದಿಂದ ಯಾರಿಗೆ ಲಾಭ?
ಜನಪ್ರತಿನಿಧಿಗಳಲ್ಲಿ ಇಚ್ಛಾಶಕ್ತಿಯಿದ್ದರೆ ದೆಹಲಿಯಲ್ಲಿ ಎರಡೂ ಇಲಾಖೆಗಳ ಸಚಿವರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಬಹುದು. ಯಾವುದೇ ಕಾಮಗಾರಿಗಳು ವಿಳಂಬವಾದರೆ ವೆಚ್ಚವೂ ಜಾಸ್ತಿಯಾಗುತ್ತದೆ. ಇದರಿಂದ ಯಾರಿಗೆ ಲಾಭವಾಗುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಉದ್ದೇಶಪೂರ್ವಕವಾಗಿ ಕಾಮಗಾರಿ ವಿಳಂಬವಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಹೆಗ್ಡೆ ಹೇಳಿದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಕಾಮಗಾರಿ ವಿಳಂಬದಿಂದ ಜನರಿಗೆ ಹಾಗೂ ರೋಗಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಇದನ್ನು ಶ್ರೀದಲ್ಲಿ ಮುಗಿಸುವುದು ಸಂಸದರ ಜವಾಬ್ದಾರಿ ಎಂದು ಹೇಳಿದರು. ನಗರಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ಕಾಂಚನ್, ಜ್ಯೋತಿ ಹೆಬ್ಬಾರ್, ಸಮಿತಿ ಪ್ರಧಾನ ಸಂಚಾಲಕ ಅಮೃತ್ ಶೆಣೈ, ಸಮಿತಿ ಅಧ್ಯಕ್ಷ ಕೀರ್ತಿ ಶೆಟ್ಟಿ ಅಂಬಲಪಾಡಿ, ಉಪಾಧ್ಯಕ್ಷರಾದ ಮಹಾಬಲ ಕುಂದರ್, ಕುಶಾಲ್ ಶೆಟ್ಟಿ, ಹರಿಪ್ರಸಾದ್ ರೈ, ಸದಸ್ಯರಾದ ಅನ್ಸಾರ್ ಅಹಮದ್, ಮೀನಾ ಬನ್ನಂಜೆ, ಅಬ್ದುಲ್ ಅಜೀಝ್,ರೆನಾಲ್ಡ್ ಪ್ರವಿಣ್ ಕುಮಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.