ಸುಮಲತಾಗೆ ನೆರವಾಗಿದ್ದಕ್ಕೆ ಇಂಡುವಾಳು ಸಚ್ಚಿದಾನಂದರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​ ಜತೆ ಗುರುತಿಸಿಕೊಂಡಿದ್ದ ಇಂಡುವಾಳು ಸಚ್ಚಿದಾನಂದ ಅವರನ್ನು ಕಾಂವಗ್ರೆಸ್​ ಉಚ್ಚಾಟನೆ ಮಾಡಿದೆ. ಪಕ್ಷವಿರೋಧ ಚಟುವಟಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಹೇಳಿದ್ದಾರೆ.

ನಟ ಅಂಬರೀಷ್​ ಮತ್ತು ಸಚಿವ ಎಂ.ಬಿ. ಪಾಟೀಲ್​ ಅವರ ಆಪ್ತವಲಯದಲ್ಲಿ ಇಂಡುವಾಳು ಸಚ್ಚಿದಾನಂದ ಗುರುತಿಸಿಕೊಂಡಿದ್ದರು. ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್​ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಇಂಡುವಾಳು ಸಚ್ಚಿದಾನಂದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಷ್​ ಅವರಿಗೆ ಬೆಂಬಲ ನೀಡಲು ಮುಂದಾಗಿದ್ದರು.

One Reply to “ಸುಮಲತಾಗೆ ನೆರವಾಗಿದ್ದಕ್ಕೆ ಇಂಡುವಾಳು ಸಚ್ಚಿದಾನಂದರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​”

Comments are closed.