More

    ಸೋಂಕಿತರು, ಶಂಕಿತರಿಗೆ ಮನೋವೈದ್ಯರಿಂದ ಕೌನ್ಸೆಲಿಂಗ್, ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿಕೆ

    ಬಳ್ಳಾರಿ: ಜಿಲ್ಲೆಯ ಕರೊನಾ ಆಸ್ಪತ್ರೆಗೆ ದಾಖಲಾದವರು, ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಹೋಮ್ ಕ್ವಾರಂಟೈನ್‌ನಲ್ಲಿ ಇರುವವರಿಗೆ ಮನೋವೈದ್ಯರು ಹಾಗೂ ಆಪ್ತ ಸಮಾಲೋಚಕರ ಮೂಲಕ ಕೌನ್ಸೆಲಿಂಗ್ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು. ಕರೊನಾ ಚಿಕಿತ್ಸೆ ಪಡೆಯುತ್ತಿರುವವರಿಗೆ ಕೌನ್ಸೆಲಿಂಗ್ ಅಗತ್ಯವಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಿತ್ಯ ಒಂದು ಸಲ ಸೋಂಕಿತರು ಹಾಗೂ ಶಂಕಿತರನ್ನು ಭೇಟಿ ಮಾಡಿ ಕೌನ್ಸೆಲಿಂಗ್ ಮಾಡಬೇಕು. ಈ ಮೂಲಕ ಅವರನ್ನು ಕರೊನಾ ಭಯದಿಂದ ಹೊರತರಲು ಕ್ರಮಕೈಗೊಳ್ಳಬೇಕೆಂದು ಹೇಳಿದರು.

    ಕರೊನಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ಕೋವಿಡ್-19ಗೆ ಸಂಬಂಧಿಸಿದ ವೈದ್ಯಕೀಯ ಪರಿಕರ ಹಾಗೂ ಔಷಧಗಳನ್ನು ಒದಗಿಸಲಾಗಿದೆ. ಇನ್ನೂ ಅಗತ್ಯವಿದ್ದರೆ ಕೂಡಲೇ ಬೇಡಿಕೆಯ ಪಟ್ಟಿ ಸಲ್ಲಿಸಬೇಕು. ಕರೊನಾ ಆಸ್ಪತ್ರೆ, ವಿಮ್ಸ್ ಆಸ್ಪತ್ರೆ ಹಾಗೂ ಫೀವರ್ ಕ್ಲಿನಿಕ್‌ಗಳಿಗೆ ಥರ್ಮಲ್ ಸ್ಕ್ಯಾನರ್‌ಗಳನ್ನು ಪೂರೈಸಲಾಗಿದೆ. ಇನ್ನೂ ಅಗತ್ಯ ಇದ್ದರೆ ನೀಡಲಾಗುವುದು. ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್‌ಗಳನ್ನು ನೀಡಬೇಕು ಎಂದರು. ಡಿಸಿ ಕಚೇರಿಯಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಮ್ ಸಿಬ್ಬಂದಿಗೆ ಕೋವಿಡ್-19 ಮಾರ್ಗಸೂಚಿ ಹಾಗೂ ಫೋನ್ ಕರೆ ಬಂದಾಗ ಸ್ಪಂದಿಸುವ ಬಗ್ಗೆ ತರಬೇತಿ ನೀಡಬೇಕೆಂದು ಜಿಲ್ಲಾಧಿಕಾರಿ ನಕುಲ್ ಸೂಚಿಸಿದರು.

    ವಿಮ್ಸ್ ನಿರ್ದೇಶಕ ಡಾ.ದೇವಾನಂದ ಮಾತನಾಡಿದರು. ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಡಿಎಚ್‌ಒ ಡಾ.ಎಚ್.ಎಲ್.ಜನಾರ್ದನ್ ಹಾಗೂ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts