More

    ಸೋಂಕಿಗೆ ಪರಸ್ಪರ ಅಂತರವೇ ಮದ್ದು : ನ್ಯಾಯಾಧೀಶೆ ಮನಗೂಳಿ ಪ್ರಭಾವತಿ ಅನಿಸಿಕೆ

    ಚಿತ್ರದುರ್ಗ: ಹೆಚ್ಚುತ್ತಿರುವ ಕರೊನಾ ಸೋಂಕಿನ ನಿಯಂತ್ರಣಕ್ಕೆ ಪರಸ್ಪರ ಅಂತರವೊಂದೇ ಪ್ರಮುಖ ಪರಿಹಾರ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಮನಗೂಳಿ ಪ್ರಭಾವತಿ ಮಲ್ಲಿಕಾರ್ಜುನ್ ಹೇಳಿದರು.

    ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುರುವಾರ ಚಿನ್ಮಯಿ ಸೇವಾ ಟ್ರಸ್ಟ್‌ನಿಂದ ಅಂಗವಿಕಲ ಮಕ್ಕಳಿಗೆ ಮಾಸ್ಕ್ ವಿತರಿಸಿ ಮಾತನಾಡಿ, ಬಡವ, ಶ್ರೀಮಂತ, ವರ್ಣ, ಜಾತಿ, ಲಿಂಗ ಭೇದವಿಲ್ಲದೆ ಎಲ್ಲೆಡೆ ಕೋವಿಡ್-19 ಹರಡುತ್ತಿದೆ ಎಂದರು.

    ಆದ್ದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೈ ತೊಳೆದುಕೊಳ್ಳುವುದು, ಪರಸ್ಪರ ಅಂತರ ಕಾಪಾಡಿಕೊಳ್ಳುವುದು ಹಾಗೂ ಈ ನಿಟ್ಟಿನಲ್ಲಿ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕಿನ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದರು.

    ವಕೀಲರ ಸಂಘದ ಜಿಲ್ಲಾಧ್ಯಕ್ಷ ಆರ್.ವಿಜಯಕುಮಾರ್ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಟಿ.ಶಿವಣ್ಣ, ವಕೀಲರ ಸಂಘದ ಉಪಾಧ್ಯಕ್ಷ ಟಿ.ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಅನಿಲ್‌ಕುಮಾರ್, ಟ್ರಸ್ಟ್ ಪ್ರಮುಖರಾದ ಗೀತಾ, ನಾಗರಾಜ್ ಸಂಗಂ, ನರೇನಹಳ್ಳಿ ಅರುಣ್‌ಕುಮಾರ್, ಗ್ರಾಪಂ ಮಾಜಿ ಸದಸ್ಯ ಪರಮೇಶ್ವರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts