ಸಾಂಕ್ರಾಮಿಕ ರೋಗ ನಿಯಂತ್ರಣ ಯಶಸ್ವಿ

ಹೊಳೆನರಸೀಪುರ: ಲಾರ್ವಾ ಸಮೀಕ್ಷೆ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿರುವ ಕಾರಣ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯುವಲ್ಲಿ ಸಾಕಷ್ಟು ಯಶಸ್ವಿಯಾಗಿದ್ದೇವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಎನ್. ರಾಜೇಶ್ ಹೇಳಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ಸೂರನಹಳ್ಳಿ ಗ್ರಾಮದಲ್ಲಿ ಲಾರ್ವಾ ಸಮೀಕ್ಷೆ ಮಾಡುತ್ತಿರುವುದನ್ನು ಪರಿಶೀಲಿಸಿ ಮಾತನಾಡಿದರು.

ಸರ್ಕಾರದ ಆರೋಗ್ಯ ಯೋಜನೆಗಳು ಯಶಸ್ವಿಯಾಗಲು ಸಾರ್ವಜನಿಕರು ಸಹಕರಿಸಬೇಕು. ಭಿತ್ತಿಪತ್ರದ ಮೂಲಕ ಗಮನಕ್ಕೆ ತರುವ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಅನುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಪರಿಶೀಲಿಸುತ್ತಿರಬೇಕು ಎಂದು ಸಲಹೆ ನೀಡಿದರು.

ಸಮೀಕ್ಷೆ ಕಾರ್ಯದಲ್ಲಿ ಹಳೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕ ಆರ್.ಬಿ. ಪುಟ್ಟೇಗೌಡ, ಎಂ.ಕೆ. ಗೌರೀಶ್ ಹಾಗೂ ರಾಜು ಭಾಗವಹಿಸಿದ್ದರು.

Leave a Reply

Your email address will not be published. Required fields are marked *