ದುಬೈ: ಚಾಂಪಿಯನ್ಸ್ ಟ್ರೋಫಿ (Champions Trophy) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೂರ್ನಿಯಲ್ಲಿ ಭಾಗಿಯಾಗುವ ತಂಡಗಳು ಈಗಾಗಲೇ ಪಾಕಿಸ್ತಾನ ಹಾಗೂ ದುಬೈಗೆ (ಭಾರತದ ಪಂದ್ಯಗಳು ಮಾತ್ರ) ಬಂದಿಳಿದಿದ್ದು, ಈಗಾಗಲೇ ತಯಾರಿ ಆರಂಭಿಸಿದೆ. ಭಾರತ ತಂಡವು ಫೆಬ್ರವರಿ 20ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಆದರೆ, ಟೂರ್ನಿ ಆರಂಭಕ್ಕೂ ಮುನ್ನ ಭಾರತ ತಂಡದಲ್ಲಿನ ಕೆಲವು ಭಿನ್ನಾಭಿಪ್ರಾಯ ಉಲ್ಬಣಗೊಂಡಿದ್ದು, ಕೋಚ್ ವಿರುದ್ಧ ವಿಕೆಟ್ ಕೀಪರ್ ಕಮ್ ಬ್ಯಾಟರ್ ಒಬ್ಬರು ಅಸಮಾಧಾನಗೊಂಡಿದ್ದು, ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ಧಾರೆ ಎಂದು ವರದಿಯಾಗಿದೆ.
ಜನವರಿ ತಿಂಗಳಲ್ಲಿ ಮುಕ್ತಾಯಗೊಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಸೋಲುವ ಮೂಲಕ ಭಾರತ ಅನಪೇಕ್ಷಿತ ದಾಖಲೆಗಳಿಗೆ ಕೊರಳೊಡ್ಡಿತ್ತು. ಇದಲ್ಲದೆ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೋತಿದ್ದು, ಕೋಚ್ ಹಾಗೂ ಆಟಗಾರರ ನಡುವಿನ ಭಿನ್ನಾಭಿಪ್ರಾಯಗಳೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿತ್ತು. ಇದೀಗ ಚಾಂಪಿಯನ್ಸ್ ಟ್ರೋಫಿ (Champions Trophy) ಆರಂಭವಾಗುವ ಹೊಸ್ತಿಲಲ್ಲೇ ತಂಡದಲ್ಲಿ ಮತ್ತೊಮ್ಮೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಪ್ರದರ್ಶನ ಮೇಲೆ ಪರಿಣಾಮ ಬೀರುವುದು ಪಕ್ಕಾ ಎಂದು ಹೇಳಲಾಗಿದೆ.
ಬಾಂಗ್ಲಾದೇಶ ವಿರುದ್ದ ಆಡುವ 11ರ ಬಳಗದ ಆಯ್ಕೆ ಸಂಬಂಧ ಕೋಚ್ ಗೌತಮ್ ಗಂಭೀರ್ ಹಾಗೂ ವಿಕೆಟ್ ಕೀಪರ್, ಬ್ಯಾಟರ್ ನಡುವೆ ಮಾತಿನ ಚಕಮಕಿಯಾಗಿದೆ ಎಂದು ಹೇಳಲಾಗಿದ್ದು, ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಟೂರ್ನಿ ಆರಂಭಕ್ಕೂ ಮುನ್ನ ಈ ಬೆಳವಣಿಗೆ ನಡೆದಿದ್ದು, ಮ್ಯಾನೇಜ್ಮೆಂಟ್ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ಕೆ.ಎಲ್. ರಾಹುಲ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಹೇಳಲಾಗಿದ್ದು, ರಿಷಭ್ ಪಂತ್ ಅಸಮಾಧಾನ ಹೊರಹಾಕಿರುವುದಾಗಿ ವರದಿಯಾಗಿದೆ.
ಇಂಗ್ಲೆಂಡ್ ವಿರುದ್ಧ ಟಿ20 ಹಾಗೂ ಏಕದಿನ ಸರಣಿ ಗೆಲ್ಲುವ ಮೂಲಕ ಭರ್ಜರಿ ಹುಮ್ಮಸ್ಸಿನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಓಟವನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ (Champions Trophy) ವಿಸ್ತರಿಸಲು ಮುಂದಾಗಿದೆ. ಭಾರತ ತನ್ನೆಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದ್ದು, ಈಗಾಗಲೇ ತಾಲೀಮು ಆರಂಭಿಸಿದೆ. ಫೆಬ್ರವರಿ 20ರಂದು ಬಾಂಗ್ಲಾದೇಶ, ಫೆಬ್ರವರಿ 23ರಂದು ಪಾಕಿಸ್ತಾನ ಹಾಗೂ ಮಾರ್ಚ್ 02ರಂದು ನ್ಯೂಜಿಲೆಂಡ್ ವಿರುದ್ಧ ಪಂದ್ಯ ನಡೆಯಲಿದೆ. ಫೆಬ್ರವರಿ 23ರಂದು ನಡೆಯುವ ಪಂದ್ಯದಲ್ಲಿ ಭಾರತ ಗೆದ್ದು ಪಾಕಿಸ್ತಾನದ ವಿರುದ್ಧ ಮತ್ತೊಮ್ಮೆ ತನ್ನ ಪ್ರಾಬಲ್ಯವನ್ನು ಮುಂದುವರೆಸಲು ಸಜ್ಜಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೀ), ಕೆಎಲ್ ರಾಹುಲ್ (ವಿಕೀ), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.
ಚಾಂಪಿಯನ್ಸ್ ಟ್ರೋಫಿ ವೇಳೆ ಪತ್ನಿಯರ ಜತೆ ಇರಲು ಅವಕಾಶ ನೀಡಿದ BCCI; ಆದರೆ ಈ ಷರತ್ತನ್ನು ಪಾಲಿಸಿದರೆ ಮಾತ್ರ
ಬನ್ನಿ ಫ್ಲೈಓವರ್ ಬಾಬಾನ ಆಶೀರ್ವಾದ ಪಡೆಯಿರಿ; Maha Kumbh ಮೇಳದ ವಿಡಿಯೋ ವೈರಲ್