More

    ನೆರೆ ಪೀಡಿತ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅತಿವೃಷ್ಟಿ ಹಾನಿ ವರದಿ ಸರ್ಕಾರಕ್ಕೆ

    ಬಣಕಲ್: ಕಳೆದ ವರ್ಷದ ನೆರೆ ಪೀಡಿತ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.

    ಮೂಡಿಗೆರೆ ತಾಲೂಕಿನ ನೆರೆಪೀಡಿತ ಪ್ರದೇಶಗಳಾದ ಚನ್ನಹಡ್ಲು, ದೇವನಗೂಲ್ ಗುಡ್ಡ, ಸುಂದರಬೈಲ್, ಬಾಳೂರು ಹೊರಟ್ಟಿ, ಮಲೆಮನೆ, ಮಧುಗುಂಡಿ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.

    ಮುಖ್ಯವಾಗಿ ಭೂ ಕುಸಿತವಾದ ಸ್ಥಳಗಳಿಗೆ ಭೇಟಿ ನೀಡಿ ತಜ್ಞರು, ಸ್ಥಳೀಯರಿಂದ ಮಾಹಿತಿ ಕಲೆ ಹಾಕಿ, ಸ್ಥಾನೀಯ ಅಧಿಕಾರಿಗಳ ಜತೆ ರ್ಚಚಿಸಿ ವರದಿ ಸಲ್ಲಿಸಲಾಗುವುದು ಎಂದರು.

    ಇದಕ್ಕೆ ಪ್ರತಿಕ್ರಿಯಿಸಿದ ಅನಂತ ಹೆಗಡೆ ಅಶೀಸರ, ಯಾರನ್ನೂ ನಿರ್ಲಕ್ಷ್ಯ ಮಾಡುವುದಿಲ್ಲ. ಪರ್ಯಾಯ ಭೂಮಿಗೆ ಮಲೆನಾಡು ಭಾಗದಲ್ಲಿ ಜಾಗದ ಸಮಸ್ಯೆ ಇದೆ. ಕಡೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಮೀನು ಇದೆ. ಅಲ್ಲಿಗೆ ಹೋಗಲು ಒಪ್ಪಿದರೆ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಜಿಲ್ಲಾಧಿಕಾರಿ, ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts