ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ

gan
Published on

ಕುಂದಾಪುರ: ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 11ನೇ ವರ್ಷ ಆಚರಣೆಯ ಅಂಗವಾಗಿ ಕುಂದಾಪುರ ಕ್ಷೇತ್ರ ಮಟ್ಟದ ಕಾರ್ಯಾಗಾರ ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷ ಆಡಳಿತವನ್ನು ಪೂರ್ಣಗೊಳಿಸಿದ್ದು ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳು ನಡೆಯುತ್ತಿವೆ. ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶದಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗಳಿಗೆ ಮಾಹಿತಿ ನೀಡಿ ಸಮರ್ಪಕವಾಗಿ ಯೋಜನೆ ತಲುಪುವಂತಾಗಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಂಚಾಲಕಿ ಸಂಧ್ಯಾ ರಮೇಶ್, ಕುಂದಾಪುರ ಮಂಡಲದ ಸಂಚಾಲಕ ಸುನೀಲ್ ಶೆಟ್ಟಿ ಹೇರಿಕುದ್ರು, ರಾಜೇಶ್, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಕುಂದಾಪುರ ಮಂಡಲದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು. ಸುಧೀರ್ ಕೆ.ಎಸ್. ಸ್ವಾಗತಿಸಿ ವಂದಿಸಿದರು.

ಕಾರ್ಯಾಗಾರ ಆರಂಭಕ್ಕೂ ಮುನ್ನ, ಗುಜರಾತ್ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರ ಗೌರವಾರ್ಥ ಮೌನಾಚರಣೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net