ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

smaranike
ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಸಿಎ ಸಂಧ್ಯಾ ಜಿ. ಅವರಿಗೆ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಸ್ಮರಣಿಕೆ ನೀಡಿ ಗೌರವಿಸಿದರು
Published on

ಹೆಬ್ರಿ: ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಸಿಎ ಫೌಂಡೇಶನ್ ಮತ್ತು ಸಿಎಸ್‌ಇಇಟಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಸಂಸ್ಥೆಯ ಹಳೇ ವಿದ್ಯಾರ್ಥಿ ಸಿಎ ಸಂಧ್ಯಾ ಜಿ. ಮಾತನಾಡಿ, ನಮ್ಮ ಜೀವನದ ಎಲ್ಲ ಯಶಸ್ಸಿಗೆ ಸಮಯ ನಿರ್ವಹಣೆ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ ಎಂದರು. ಪ್ರಾಂಶುಪಾಲ ಅಮರೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸೃಷ್ಟಿ ಯು.ಶೆಟ್ಟಿ ಸ್ವಾಗತಿಸಿದರು. ಆರಾಧ್ಯಾ ವಂದಿಸಿದರು. ಲಕ್ಷ್ಯ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net