ಆದಿವಾಸಿಗಳಿಗೆ ಮೂಲಸೌಕರ್ಯ ಶ್ಲಾಘನೀಯ : ಎಸ್‌ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ಹೇಳಿಕೆ

New Project (4)
Published on

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅರಣ್ಯವಾಸಿಗಳಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಭೆ ನಡೆಸಿ ಮಹತ್ವದ ತೀರ್ಮಾನಗಳನ್ನು ಕೈಗೊಂಡಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ತಾಲೂಕು ಎಸ್‌ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ ತಿಳಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಅರಣ್ಯವಾಸಿಗಳ ವಾಸಿಸುವ ಪ್ರದೇಶಗಳಲ್ಲಿ ಮೂಲಸೌಕರ್ಯ ಮರೀಚಿಕೆಯಾಗಿತ್ತು. ಈಗ ಸಿದ್ದರಾಮಯ್ಯ ಸಭೆ ನಡೆಸಿ ಮೂಲಸೌಕರ್ಯಗಳನ್ನು ಒದಗಿಸಲು ಮುತುವರ್ಜಿ ವಹಿಸಿರುವುದರಿಂದ ಆದಿವಾಸಿ ಸಮುದಾಯಕ್ಕೆ ಅನುಕೂಲವಾಗಲಿದೆ. ಸಭೆಯ ನಿರ್ಣಯಗಳನ್ನು ಜಿಲ್ಲಾಡಳಿತ ತಕ್ಷಣವೇ ಜಾರಿಗೊಳಿಸಬೇಕು. ಆದಿವಾಸಿ ಮಲೆಕುಡಿಯ ಸಮುದಾಯಕ್ಕೆ ಸೌಲಭ್ಯ ಒದಗಿಸಿ ಸಾಮಾಜಿಕ ಸಮಾನತೆ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net