More

    ಕಾಡಂಚಿನ ಹಳ್ಳಿಗಳಲ್ಲಿ ಮೂಲಸೌಕರ್ಯ ಮರೀಚಿಕೆ

    ಗುಂಡ್ಲುಪೇಟೆ: ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ಕಾಡಂಚಿನ ಗ್ರಾಮಗಳಿಗೆ ಮೂಲಸೌಕರ್ಯಗಳು ಮರೀಚಿಕೆಯಾಗಿವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಬೇಸರ ವ್ಯಕ್ತಪಡಿಸಿದರು.

    ತಾಲೂಕಿನ ಯಡವನಹಳ್ಳಿಯಲ್ಲಿ ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು. ದಿನ ಬೆಳಗಾದರೆ ರೈತರಿಗೆ ಆನೆಗಳ ಮತ್ತು ಪ್ರಾಣಿಗಳ ಕಾಟದಿಂದ ಬೆಳೆದ ಬೆಳೆ ಕೈಗೆ ಬಾರದಂತಾಗಿದೆ. ಶಾಲಾ, ಕಾಲೇಜುಗಳಿಗೆ ಹಾಗೂ ಬೇಗೂರಿನ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾಭ್ಯಾಸಕ್ಕೆ ತೊಡಕಾಗಿದೆ. ತಮ್ಮ ದಿನನಿತ್ಯದ ಕೆಲಸಗಳಿಗೆ ರೈತರು ತಾಲೂಕು ಕಚೇರಿ ಮತ್ತು ನಾಡಕಚೇರಿಗಳಿಗೆ ಅಲೆಯುವ ಪರಿಸ್ಥಿತಿ ಇದೆ. ವಿದ್ಯುತ್ ಇಲಾಖೆಯಲ್ಲಿ ರೈತರಿಗೆ ಕೃಷಿ ಮಾಡಲು ಹೊಸದಾಗಿ ಟಿಸಿಗಳನ್ನು ಕೊಡುತ್ತಿಲ್ಲ. ಜನಪ್ರತಿನಿಧಿಗಳು ಬರೀ ಆಶ್ವಾಸನೆಗಳನ್ನು ನೀಡಿ ಹೋಗುತ್ತಿದ್ದು ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಈ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಸಕಾಲದಲ್ಲಿ ಪರಿಹಾರ ಸಿಗದಿದ್ದರೆ ತೀವ್ರ ಹೋರಾಟ ರೂಪಿಸಲಾಗುವುದು ಎಂದರು.

    ರೈತ ಮುಖಂಡರಾದ ಬೆಟ್ಟದ ಮಾದಹಳ್ಳಿ ಷಣ್ಮುಗಸ್ವಾಮಿ, ಅಂಬಳೆ ಕುಮಾರ, ಮಂಚಹಳ್ಳಿ ಎಂ.ಎನ್. ಮಣಿಕಂಠನಾಯಕ್, ಬೆಟ್ಟೆಗೌಡ, ಶ್ರೀನಿವಾಸ್ ಮಂಜುನಾಥ್, ಮಹದೇವ್, ಬಸವಲಿಂಗ ಸ್ವಾಮಿ, ನಾಗಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts