More

    ಕಾರ್ಮಿಕ ಅಧಿಕಾರಿಯಿಂದ ಅನ್ಯಾಯ

    ಚಿಕ್ಕಮಗಳೂರು: ನೈಜ ಕಟ್ಟಡ ಕಾರ್ಮಿಕರಿಗೆ ಅನ್ಯಾಯವೆಸಗುತ್ತಿರುವ ಕಾರ್ಮಿಕ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸಿ.ವಸಂತ್‌ಕುಮಾರ್ ಒತ್ತಾಯಿಸಿದರು.

    ಆಜಾದ್ ಪಾರ್ಕ್ ವೃತ್ತದಲ್ಲಿ ಸಂಘದಿಂದ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ, ಮೊಯಿನ್ ಅಬ್ರಾರ್ ಪಾಷಾ ಎಂಬುವವರು ಮದುವೆ ಸಂಬಂಧ ಅರ್ಜಿ ಸಲ್ಲಿಸಿದ್ದರು. ಉದ್ಯೋಗ ಪ್ರಮಾಣ ಪತ್ರದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ವಿವರ ಅಪೂರ್ಣವೆಂದು ಪರಿಗಣಿಸಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್ ತಿರಸ್ಕರಿಸಿದ್ದಾರೆ ಎಂದು ಆರೋಪಿಸಿದರು.
    ಹೆಸರೇ ಇಲ್ಲದ ಸಂಘದೊಂದಿಗೆ ಶಾಮೀಲಾಗಿ ಕಾರ್ಮಿಕ ಮಂಡಳಿ ಅಧಿಕಾರಿಗಳು ದ್ರೋಹವೆಸಗುತ್ತಿದ್ದಾರೆ. ಇದನ್ನು ಪ್ರಶ್ನಿಸಿ ಮೇಲಧಿಕಾರಿಗಳಿಗೆ ದೂರು ನೀಡುವುದಾಗಿ ಹೇಳಿದರೂ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ದೂರಿದರು.
    ನೈಜ ಕಾರ್ಮಿಕರಿಗೆ ಸವಲತ್ತು ಒದಗಿಸುವ ಬದಲು ಹಣದಾಸೆಗಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕಾರ್ಮಿಕರ ಅಧಿಕಾರಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಬೊಕ್ಕಸಕ್ಕೆ ಮತ್ತು ನೈಜ ಕಟ್ಟಡ ಕಾರ್ಮಿಕರಿಗಾಗುತ್ತಿರುವ ಅನ್ಯಾಯ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
    ಶಿರಸ್ತೇದಾರ್ ಹೇಮಂತ್‌ಕುಮಾರ್ ಮೂಲಕ ಜಿಲ್ಲಾಡಳಿತಕ್ಕೆ ಮುಖಂಡರು ಮನವಿ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಜಿ.ರಘು, ಪ್ರಧಾನ ಕಾರ್ಯದರ್ಶಿ ಎ.ಜಯಕುಮಾರ್, ತಾಲೂಕು ಉಪಾಧ್ಯಕ್ಷ ಮಂಜೇಗೌಡ, ಕಾರ್ಯಕಾರಿ ಸಮಿತಿ ಸದಸ್ಯ ಸಿ.ಸಿ.ಮಂಜುನಾಥ್, ಸದಸ್ಯರಾದ ಕುಪ್ಪನ್, ಟಿ.ಎಂ.ವಸಂತರಾಜು, ಮಂಜುಳಾ, ಚಂದ್ರಾಚಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts