ತುಂಡಾಗಿ ದೇಹದಿಂದ ದೂರದಲ್ಲಿ ಬಿದ್ದ ಕೈ; ಭೀಕರ ಅಪಘಾತದಲ್ಲಿ ಮೂವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

Innova Accident
Published on

ಹಾಸನ: ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಅದರಲ್ಲೂ ಒಬ್ಬರ ಕೈ ತುಂಡಾಗಿ ದೇಹದಿಂದ ದೂರದಲ್ಲಿ ಬಿದ್ದಿದ್ದ ದೃಶ್ಯ ಕಂಡುಬಂದಿದೆ. ಹಾಸನ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಾರೋಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕೆಎ-02, ಎಂಕ್ಯೂ-5328 ನಂಬರ್‌ನ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಗಾಯಾಳುಗಳು ಬೆಂಗಳೂರು ಮೂಲದವರು ಎಂಬ ಮಾಹಿತಿ ಸಿಕ್ಕಿದೆ.

ಕಾರಿನಲ್ಲಿ ಐವರು ಸ್ನೇಹಿತರಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಮದ್ಯಸೇವನೆ ಹಾಗೂ ಅತಿವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಒಬ್ಬರ ಕೈ ತುಂಡಾಗಿ ದೇಹದಿಂದ ತುಂಬಾ ದೂರಲ್ಲಿ ಬಿದ್ದಿದೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net