More

    ಮುಡಿಪು ಬಾಕ್ಲೈಟ್ ದಂಧೆ ತನಿಖೆಗೆ ಆಗ್ರಹ

    ಮಂಗಳೂರು: ಮುಡಿಪು ಪ್ರದೇಶದಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ದಂಧೆ ನಡೆಯುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು 50 ಕೋಟಿ ರೂ. ಅಧಿಕ ರಾಜಸ್ವ ನಷ್ಟವಾಗಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

    ಜಿಲ್ಲೆಯ ಶಾಸಕರೊಬ್ಬರ ಕುಟುಂಬದ ಹೆಸರಿನಲ್ಲಿ ಪರವಾನಗಿ ದುರ್ಬಳಕೆ ಮಾಡಿ ಕೆಂಪು ಕಲ್ಲು ಗಣಿಗಾರಿಕೆ ದಂಧೆ ನಡೆಯುತ್ತಿದೆ. ಬಡಗ ಎಡಪದವಿನಲ್ಲಿ ಪರವಾನಗಿ ಹೊಂದಿದ್ದು, ಮುಡಿಪಿನಲ್ಲಿ ಗಣಿಗಾರಿಕೆ ನಡೆಸುತ್ತಿದೆ. ಇದಕ್ಕೆ ರಾಜ್ಯ ಮಾತ್ರವಲ್ಲದೆ ಆಂಧ್ರ, ತಮಿಳುನಾಡು, ಕೇರಳದ ದಂಧೆಕೋರರೂ ಕೈಜೋಡಿಸಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಈ ಬಗ್ಗೆ ಲೋಕಾಯುಕ್ತಕ್ಕೂ ದೂರು ಸಲ್ಲಿಸಲಾಗಿದೆ. ಆದರೆ ರಾಜಕೀಯ ಪ್ರಭಾವ ಬಳಸಿ ದಂಧೆ ಮುಂದುವರಿದಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಡಿಪು ಇನ್ನೊಂದು ಬಳ್ಳಾರಿ ಆಗುವುದರಲ್ಲಿ ಸಂಶಯವಿಲ್ಲ. ದಂಧೆ ವಿರುದ್ಧ ಕಾರ್ಯಾಚರಣೆ ನಡೆಸಿದ ಮಂಗಳೂರಿನ ಸಹಾಯಕ ಕಮಿಷನರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಜಿಲ್ಲಾಧಿಕಾರಿ ಸಮಿತಿ ರಚಿಸಿ ಈ ದಂಧೆ ನಿಯಂತ್ರಿಸುವ ಭರವಸೆ ನೀಡಿದ್ದಾರೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ನವೀನ್‌ಡಿಸೋಜ, ಅಬ್ದುಲ್ ರವೂಫ್, ನೀರಜ್‌ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts