More

    ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಒತ್ತಾಯ

    ಬ್ಯಾಡಗಿ: ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಹಾಗೂ ಹಾಲು ಘಟಕ ಸ್ಥಾಪಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ದ್ಯಾಮಣ್ಣನವರ ಗವಿಸಿದ್ದಪ್ಪ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
    ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಹಾವೇರಿ ಜಿಲ್ಲೆಯಾಗಿ ಎರಡು ದಶಕ ಕಳೆದರೂ ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ರೈತ ಸಂಘ 15 ವರ್ಷಗಳಿಂದ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಆರಂಭಿಸುವಂತೆ ಮನವಿ ಸಲ್ಲಿಸಿ, ಪ್ರತಿಭಟನೆ, ಹೋರಾಟ ಇತ್ಯಾದಿಗಳ ಮೂಲಕ ಸರ್ಕಾರಕ್ಕೆ ಎಚ್ಚರಿಸಿದೆ. ಆದರೂ, ರೈತರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ದೂರಿದರು.
    ಹಾಲು ಸಂಸ್ಕರಣ ಘಟಕ ಸ್ಥಾಪಿಸುವುದಾಗಿ ಇತ್ತೀಚೆಗೆ ಘೊಷಿಸಿರುವುದು ಸ್ವಾಗತಾರ್ಹ. ಆದರೆ, ಖಾಸಗಿಯವರ ಸಹಭಾಗಿತ್ವದಲ್ಲಿ ಸಂಸ್ಕರಣ ಘಟಕ ಆರಂಭಿಸುವುದನ್ನು ರೈತ ಸಂಘ ವಿರೋಧಿಸುತ್ತೇವೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಾಲಿನ ಪೋ›ತ್ಸಾಹ ಧನ ಹಾಗೂ ಕುರಿ, ಹೈನು ರಾಸು ಮೃತಪಟ್ಟಲ್ಲಿ ಪಶುಸಂಗೋಪನೆ ಇಲಾಖೆಯಿಂದ ನೀಡುತ್ತಿದ್ದ ಪರಿಹಾರ ಸ್ಥಗಿತಗೊಳಿಸಿದ್ದು, ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದರು. ಒಂದು ವೇಳೆ ಸರ್ಕಾರ ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
    ರೈತ ಮುಖಂಡರಾದ ಗಂಗಣ್ಣ ಎಲಿ, ಚಿಕ್ಕಪ್ಪ ಛತ್ರದ, ಮಲ್ಲೇಶಪ್ಪ ಡಂಬಳ, ಪ್ರಕಾಶ ಶಿದ್ದಪ್ಪನವರ, ಕಲ್ಲನಗೌಡ್ರ ಪಾಟೀಲ, ಬಸಯ್ಯ ಪಾಟೀಲ, ಭರಮಪ್ಪ ಮೋಟೆಬೆನ್ನೂರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts