More

    ನೀರಾವರಿ ಯೋಜನೆ ಸ್ಥಗಿತಕ್ಕೆ ಒತ್ತಾಯ

    ರಟ್ಟಿಹಳ್ಳಿ: ಶಿಕಾರಿಪುರ ತಾಲೂಕಿನ ಉಡುಗಣಿ-ತಾಳಗುಂದ-ಹೊಸುರು ನೀರಾವರಿ ಯೋಜನೆಗೆ ರಟ್ಟಿಹಳ್ಳಿ ತಾಲೂಕಿನ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಯೋಜನೆ ಸ್ಥಗಿತವಾಗುವವರೆಗೂ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಪುನರುಚ್ಛರಿಸಿದರು.

    ಪಟ್ಟಣದ ಭಗತ್​ಸಿಂಗ್ ವೃತ್ತದಲ್ಲಿ ಜರುಗುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಣ್ಣನವರ ಮತ್ತು ಎಸ್ಪಿ ದೇವರಾಜ ಭೇಟಿ ನೀಡಿ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿದರು ರೈತರು ಪಟ್ಟು ಸಡಿಲಿಸಲಿಲ್ಲ.

    ಜಿಲ್ಲಾಧಿಕಾರಿ ಸಂಜೆಯ ಶೆಟ್ಟಣ್ಣವರ ಮಾತನಾಡಿ, ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ರ್ಚಚಿಸುತ್ತಿದ್ದೇನೆ. ಸರ್ಕಾರಕ್ಕೆ ಇಲ್ಲಿನ ವರದಿಯನ್ನು ಸಂಪೂರ್ಣವಾಗಿ ಸಲ್ಲಿಸಲಾಗುವುದು. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದ್ದು, ಉಪವಾಸ ಸತ್ಯಾಗ್ರಹವನ್ನು ಕೈಬಿಡಬೇಕು ಎಂದು ಮನವಿ ಮಾಡಿದರು. ಆದರೆ, ಪ್ರತಿಭಟನಾಕಾರರು ಕಾಮಗಾರಿ ನಿಲ್ಲುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

    ಹಿರಿಯ ವಕೀಲ ಬಿ.ಡಿ. ಹಿರೇಮಠ ಮಾತನಾಡಿ, ಒಂದು ವಾರದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಈ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ. ಆದರೂ ಕಾಮಗಾರಿ ಮುಂದುವರಿಸಲಾಗಿದೆ. ನಿರ್ಲಕ್ಷ್ಯ ಹೀಗೆಯೇ ಮುಂದುವರಿದರೆ ಇನ್ನೆರಡು ದಿನಗಳಲ್ಲಿ ನಾವೆಲ್ಲರೂ ಇಲ್ಲಿಯೇ ವಿಷ ಸೇವಿಸಿ ಪ್ರಾಣ ಬಿಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ತುಂಗಾ ಮೇಲ್ದಂಡೆಯ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಇಲ್ಲಿಯವರಿಗೆ ಸಮರ್ಪಕವಾಗಿ ಪರಿಹಾರ ಸಿಗುತ್ತಿಲ್ಲ. ಕೋರ್ಟ್ ಆದೇಶವನ್ನೂ ಅಧಿಕಾರಿಗಳು ಉಲ್ಲಂಘಿಸುತ್ತಿದ್ದಾರೆ. ನೇರವಾಗಿ ಅವರ ಮೇಲೆ ಪ್ರಕರಣ ದಾಖಲಿಸಬೇಕು. ನಾನೇ ದೂರು ದಾಖಲಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಂ. ಕುಬೇರಪ್ಪ, ವಕೀಲರಾದ ವಸಂತ ದ್ಯಾವಕ್ಕಳವರ, ಶೇಖರ ಬಣಕಾರ, ಜೆ.ಎಸ್. ಮರ್ಕಳ್ಳಿ, ರೈತ ಮುಖಂಡರಾದ ಉಜಿನೆಪ್ಪ ಕೋಡಿಹಳ್ಳಿ, ವಿನಯ ಪಾಟೀಲ, ಹರೀಶ ಇಂಗಳಗೊಂದಿ, ಮಾಲತೇಶಯ್ಯ ಪಾಟೀಲ, ಮಂಜಪ್ಪ ಮುದಿಯಪ್ಪನವರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts