ಸೌಲಭ್ಯಕ್ಕಾಗಿ ಗೃಹ ಕಾರ್ಮಿಕರ ಒತ್ತಾಯ

ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಗೃಹ ಕಾರ್ಮಿಕರ ಚಳವಳಿ, ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ, ಕೊನ್ ೆಡರೇಷನ್ ಆ್ ಫ್ರೀ ಟ್ರೇಡ್ ಯೂನಿಯನ್ಸ್ ಆ್ ಇಂಡಿಯಾ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಿಲ್ವರ್ ಜ್ಯೂಬಿಲಿ ಉದ್ಯಾನದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು. ಕಾರ್ಮಿಕರಿಗೆ ಪಿಎ್, ಇಎಸ್‌ಐ, ಪಿಂಚಣಿ, ವೈದ್ಯಕೀಯ ವಿಮೆ ಸೌಲಭ್ಯ ನೀಡಬೇಕು. ಪ್ರತಿ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್‌ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ನೀಡುತ್ತಿರುವ ಸ್ಮಾರ್ಟ್‌ಕಾರ್ಡ್ ಗುರುತಿನ ಚೀಟಿಯಾಗಿ ಉಳಿಯದೆ ಅದರೊಂದಿಗೆ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಜಿಲ್ಲೆ ಮತ್ತು ತಾಲೂಕಲ್ಲಿ ಕಾರ್ಮಿಕ ಮಿತ್ರ ಕೇಂದ್ರ ಸ್ಥಾಪಿಸಬೇಕು. ರಾಷ್ಟ್ರೀಯ ಶಾಸನ ರೂಪಿಸಬೇಕು. ಪ್ರಸ್ತುತ ಸಾಲಿನ ಕನಿಷ್ಠ ವೇತನ ಪರಿಷ್ಕರಿಸಬೇಕು. ಸರ್ಕಾರದ ಸೌಲಭ್ಯ ಪಡೆಯಲು ಕಡ್ಡಾಯ ಮಾಡಿರುವ ಆಹಾರ ಪಡಿತರ ಚೀಟಿಯನ್ನು ಅಸಂಘಟಿತ ಕಾರ್ಮಿಕರಿಗೆ ಅನ್ವಯಿಸಬಾರದು ಎಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ಕೃಷ್ಣಪ್ಪಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಶೋಭಾ, ಲಲಿತಮ್ಮ, ನಾಗಮ್ಮ, ಇಂದ್ರಮ್ಮ, ಮಂಜುಳಾ ಜಯಮ್ಮ, ಶಶಿಕಲಾ ಇತರರಿದ್ದರು.

Leave a Reply

Your email address will not be published. Required fields are marked *