More

    ಅರಣ್ಯಾಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

    ಸಿದ್ದಾಪುರ: ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಾಗಿರುವ ಪ್ರದೇಶದ ಅರಣ್ಯ ವಾಪ್ತಿಯ ಮತಗಟ್ಟೆಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅರಣ್ಯ ವ್ಯಾಪ್ತಿಯ ಐದು ವಿಭಾಗದ ಮತಗಟ್ಟೆಗಳನ್ನು ಗುರುತಿಸಿ ಹೆಚ್ಚುವರಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ವಿರಾಜಪೇಟೆ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ತಿಳಿಸಿದ್ದಾರೆ.

    ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಿದ್ದು ಅತ್ಯಗತ್ಯವಿದ್ದಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತರಲು ಇಲಾಖೆಯಿಂದ ವಾಹನ ಸೌಲಭ್ಯ ಕಲ್ಪಿಸಲಾಗುವುದು. ಮತದಾರರು ನಿರ್ಭೀತಿಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತ ಚಲಾಯಿಸುವಂತೆ ಮನವಿ ಮಾಡಿದರು.

    ವಲಯ ಅರಣ್ಯಾಧಿಕಾರಿ ಕಳ್ಳಿರ ಎಂ.ದೇವಯ್ಯ, ಉಪ ವಲಯ ಅರಣ್ಯಾಧಿಕಾರಿ ದೇಯಂಡ ಸಂಜಿತ್ ಸೋಮಯ್ಯ, ಆರ್‌ಆರ್‌ಟಿ ಸಿಬ್ಬಂದಿ ವಿನೋದ್, ಸಚ್ಚಿನ್ ಹರೀಶ್, ದರ್ಶನ್, ಮಹೇಶ್ ವಿಕಾಸ್, ಅನಿಲ್ ವಾಹನ ಚಾಲಕ ಅಶೋಕ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts