More

    ಶಾಸಕರಿಂದ ರಸ್ತೆ ಕಾಮಗಾರಿ ಪರಿಶೀಲನೆ

    ಚಾಮರಾಜನಗರ: ನಗರದ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಮಂಗಳವಾರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪರಿಶೀಲನೆ ನಡೆಸಿದರು.

    ರಸ್ತೆಗಳ ಅಭಿವೃದ್ಧಿ ಸಂಬಂಧ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿ ನಗರದ ಬಿ. ರಾಚಯ್ಯ ಜೋಡಿರಸ್ತೆ ವಿಸ್ತರಣೆ ಹಾಗೂ ನ್ಯಾಯಾಲಯದ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.

    ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ಕಾಮಗಾರಿ ಪರಿಶೀಲನೆ ಆರಂಭಿಸಿ, ರಸ್ತೆ ವಿಸ್ತರಣೆ ಸಮಸ್ಯೆಗಳನ್ನು ವೀಕ್ಷಿಸಿದರು. ಅಂತೆಯೇ, ಕರಿನಂಜನಪುರ ರಸ್ತೆಯ 2 ಬದಿಯಲ್ಲಿ ಒತ್ತುವರಿ ಆಗಿರುವ ಬಗ್ಗೆ ನಗರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದಿದಲ್ಲದೆ, ಒತ್ತುವರಿ ವಿಸ್ತೀರ್ಣವನ್ನು ಅಳತೆ ಮಾಡಿಸಿದರು. ಕರಿನಂಜನಪುರ ರಸ್ತೆಯಲ್ಲಿ ನಡೆಯುತ್ತಿರುವ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟತೆ ಕಾಯ್ದುಕೊಂಡು ಪೂರ್ಣಗೊಳಿಸಿ ಜನರ ಸಂಚಾರಕ್ಕೆ ನೀಡಬೇಕು. ಮನೆ ನಿರ್ಮಾಣಕ್ಕೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಸರ್ಕಾರಿ ಜಾಗ ಒತ್ತುವರಿಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕೆಂದು ಸಿ.ಪುಟ್ಟರಂಗಶೆಟ್ಟಿ ತಾಕೀತು ಮಾಡಿದರು.

    ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಚರಂಡಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಪರಿಹಾರಕ್ಕೆ ಪ್ರಸ್ತಾವನೆ ತಯಾರಿಸಿ ಸಲ್ಲಿಸುವಂತೆ ಸೂಚನೆ ನೀಡಿದರು.

    ರಸ್ತೆ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳು ಯಾವುದೇ ಒತ್ತಡಕ್ಕೂ ಒಳಗಾಗಬಾರದು. ರಸ್ತೆ ವಿಸ್ತರಣೆ ಯಿಂದ ಆಸ್ತಿ ಕಳೆದುಕೊಂಡಿರುವವರ ಪಟ್ಟಿ ಮಾಡಿ ಪರಿಹಾರ ವಿತರಣೆಯನ್ನು ಆದ್ಯತೆ ಮೇರೆಗೆ ಮಾಡಿಕೊಡಲಾಗುವುದು ಡಿಸಿ ಶಿಲ್ಪಾನಾಗ್ ಹೇಳಿದರು.

    ನಗರಸಭಾ ಸದಸ್ಯ ಆರ್.ಪಿ. ನಂಜುಂಡಸ್ವಾಮಿ, ಎಂ.ಆರ್.ರಾಜಪ್ಪ, ಮಹೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ನಟರಾಜು, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರಿಜಮ್ಮ, ಕಂದಾಯ ನಿರೀಕ್ಷಕ ಶರವಣ, ಹಿರಿಯ ಆರೋಗ್ಯ ನಿರೀಕ್ಷ ಮಂಜುನಾಥ್, ನಾರಾಯಣ್, ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ, ಸಮುದಾಯ ಸಂಘಟನಾಧಿಕಾರಿ ವೆಂಕಟನಾಯಕ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts