ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸ್ಫೂರ್ತಿದಾಯಕ ಕಾರ್ಯ

naga mandala
ನಾಗಬ್ರಹ್ಮ ರಕ್ತೇಶ್ವರಿ ಕ್ಷೇತ್ರದ ಪುನಃ ಪ್ರತಿಷ್ಠಾಪನಾ ಮತ್ತು ನಾಗ ಬ್ರಹ್ಮಮಂಡಲೋತ್ಸವದಲ್ಲಿ ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಆಶಿರ್ವಚನ ನೀಡಿದರು.
Published on

ಕಾರ್ಕಳ: ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರು ಜ್ಞಾನ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಸ್ಫೂರ್ತಿದಾಯಕವಾದದ್ದು ಎಂದು ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಹೇಳಿದರು.

ಉಡುಪಿ ಕಡಿಯಾಳಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ನಾಗಬ್ರಹ್ಮ ರಕ್ತೇಶ್ವರಿ ಕ್ಷೇತ್ರದ ಪುನಃ ಪ್ರತಿಷ್ಠಾಪನಾ ಮತ್ತು ನಾಗ ಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆದ ಮಾಜ ಸೇವಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್ಥಿಕ ಸಂಕಷ್ಟದಲ್ಲಿರುವವರಿಗೆ, ವಿಶೇಷ ಚೇತನರಿಗೆ, ಸಮಾಜ ಸೇವಾ ಟ್ರಸ್ಟ್‌ಗಳಿಗೆ ಒಟ್ಟು 8.60 ಲಕ್ಷ ರೂ. ಮೊತ್ತವನ್ನು ಸಹಾಯಧನವಾಗಿ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನೀಡಲಾಯಿತು. ರಾಮಕೃಷ್ಣ ತಂತ್ರಿ, ಮಾರ್ಗದರ್ಶಕ ನಾರಾಯಣ ಭಟ್ ರೆಂಜಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net