20.4 C
Bangalore
Monday, December 9, 2019

ಮೊಬೈಲ್​​ ಗೇಮ್​ನಿಂದ ಪ್ರಭಾವಿತಳಾದ 15 ವರ್ಷದ ಬಾಲಕಿ 18 ದಿನಗಳ ಕಾಲ ಮನೆ ಬಿಟ್ಟು ಹೋಗಿದ್ದೆಲ್ಲಿಗೆ?

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ನವದೆಹಲಿ: ಟ್ಯಾಕ್ಸಿ ಡ್ರೈವರ್-2(ದಕ್ಷಿಣ ಕೊರಿಯಾ ಮೂಲ)​ ಹೆಸರಿನ ಮೊಬೈಲ್​ ಗೇಮ್​ನಿಂದ ಪ್ರಭಾವಿತಳಾದ 15 ವರ್ಷದ ಬಾಲಕಿಯೊಬ್ಬಳು ಉತ್ತರಾಖಂಡದ ಉಧಮ್​ಸಿಂಗ್​ ನಗರ ಜಿಲ್ಲೆಯ ತನ್ನ ಮನೆಯಿಂದ ನಾಪತ್ತೆಯಾದ ಬಳಿಕ 18 ದಿನದಲ್ಲಿ ದೇಶದ 10 ನಗರಗಳನ್ನು ಸುತ್ತಿದ್ದಾಳೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ದೆಹಲಿಯ ಕಮಲ್​ ಮಾರುಕಟ್ಟೆ ಪ್ರದೇಶದಲ್ಲಿ ರಿಕ್ಷಾ ಚಾಲಕನೊಂದಿಗೆ ವಾಗ್ವಾದಕ್ಕೆ ಇಳಿದಿದ್ದ ಬಾಲಕಿಯನ್ನು ದೆಹಲಿ ಪೊಲೀಸರು ನೋಡಿದ್ದಾರೆ. ಬಳಿಕ ಆಕೆಯನ್ನು ವಶಕ್ಕೆ ಪಡೆದುಕೊಂಡು ಉಧಮ್​ಸಿಂಗ್​ ನಗರ ಪೊಲೀಸ್​​ರನ್ನು ಸಂಪರ್ಕಿಸಿ ಅಕೆಯನ್ನು ಶುಕ್ರವಾರ ಬೆಳಗ್ಗೆ ಪಂತ್​ ನಗರಕ್ಕೆ ಕರೆತರಲಾಗಿದೆ.

ಉಧಮ್​ಸಿಂಗ್​ ನಗರ ಜಿಲ್ಲೆಯ ಪಂತ್​ ನಗರದಲ್ಲಿನ ತನ್ನ ಮನೆಯಿಂದ ಜುಲೈ 1ರಿಂದ ಬಾಲಕಿ ನಾಪತ್ತೆಯಾಗಿರುವುದಾಗಿ ವರದಿಯಾಗಿತ್ತು. ಕೊನೆಯದಾಗಿ ಆಕೆಯನ್ನು ದೆಹಲಿಯ ಕಮಲ್​ ಮಾರುಕಟ್ಟೆ ಪ್ರದೇಶದಲ್ಲಿ ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಉಧಮ್​ಸಿಂಗ್​ ನಗರದ ಹಿರಿಯ ಪೊಲೀಸ್​ ವರಿಷ್ಠಾಧಿಕಾರಿ ಬರಿಂದರ್ಜಿತ್​ ಸಿಂಗ್​ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಆಕೆಯನ್ನು ಮನೆಗೆ ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ. ತನ್ನ ತಾಯಿಯ ಮೊಬೈಲ್​ನಲ್ಲಿ ಆಡುತ್ತಿದ್ದ ಟ್ಯಾಕ್ಸಿ ಡ್ರೈವರ್​-2 ಗೇಮ್​ನ ಪ್ರಭಾವದಿಂದ ಹೀಗಾಗಿದೆ ಎಂದು ಹೇಳಲಾಗಿದೆ.

ಬೇಸಿಗೆಯ ಸಮಯದಲ್ಲಿ ನನ್ನ ತಾಯಿಯ ಮೊಬೈಲ್​ನಿಂದ ಗೇಮ್​ ಡೌನ್​ಲೋಡ್​ ಮಾಡಿಕೊಂಡೆ. ಬಳಿಕ ಗೇಮ್​ನಲ್ಲಿ ಸಂಪೂರ್ಣ ತೊಡಗಿಕೊಂಡು ಎಲ್ಲ ಹಂತಗಳನ್ನು ಯಶಸ್ವಿಯಾಗಿ ಮುಗಿಸಿದೆ. ಗೇಮ್​ನಲ್ಲಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಟ್ಯಾಕ್ಸಿ ಡ್ರೈವರ್​ ಪಾತ್ರವನ್ನು ನಿಜ ಜೀವನದಲ್ಲಿ ಮಾಡಬೇಕೆಂದು ನಿರ್ಧಾರ ಮಾಡಿದೆ ಎಂದು ತನಿಖಾಧಿಕಾರಿ ಹಾಗೂ ಸಬ್​ಇನ್ಸ್​ಪೆಕ್ಟರ್​ ವಿಪುಲ್​ ಜೋಶಿ ನಡೆಸಿದ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ.

ಗೇಮ್​ನಲ್ಲಿ ವಿವಿಧ ಪ್ರದೇಶಗಳಿಂದ ಪ್ರಯಾಣಿಕರನ್ನು ಪಿಕ್​ಅಪ್​ ಮಾಡುವ ಟ್ಯಾಕ್ಸಿ ಡ್ರೈವರ್​ ತನ್ನ ದಾರಿಯಲ್ಲಿ ಅಡೆತಡೆಗಳನ್ನು ದಾಟಿ ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುತ್ತಾನೆ. ಅದೇ ರೀತಿಯಾಗಿ ಒಂದು ದಿನವು ಎಲ್ಲಿಯೂ ಉಳಿದುಕೊಳ್ಳದೇ ದೇಶದ ವಿವಿಧ ನಗರಗಳಿಗೆ ಭೇಟಿ ನೀಡಲು ಬಾಲಕಿ ತೀರ್ಮಾನಿಸಿ ಜುಲೈ 1ರಂದು ಮನೆ ಬಿಟ್ಟಿದ್ದಳು ಎಂದು ಜೋಶಿ ತಿಳಿಸಿದ್ದಾರೆ.

ಬಾಲಕಿಯ ಯೋಜನೆಯಂತೆ ಮನೆ ಬಿಡುವ ವೇಳೆ ಸುಮಾರು 12,000 ರೂ. ಹಣ್ಣವನ್ನು ಕಳ್ಳತನ ಮಾಡಿಕೊಂಡು ಉತ್ತರಾಖಂಡದ ಕಿಚ್ಚ ಟೌನ್​ನಿಂದ ಉತ್ತರ ಪ್ರದೇಶದ ಬರೇಲಿಗೆ ಬಸ್​ ಏರಿದ್ದಳು. ಬಳಿಕ ಲಖನೌಗೆ ತೆರಳಿ, ಅಲ್ಲಿಂದ ರಾಜಸ್ಥಾನದ ಜೈಪುರಕ್ಕೆ ಬಂದಿಳಿದಿದ್ದಳು. ನಂತರ ಉದಯ್​ಪುರ, ಜೋಧ್ಪುರ, ಅಹಮದಬಾದ್​ ಮತ್ತು ಪುಣೆ ನಗರಗಳಲ್ಲಿ ಬಾಲಕಿ ಸುತ್ತಾಡಿದ್ದಾಳೆ. ಬಳಿಕ ಪುಣೆಯಿಂದ ವಾಪಸ್​ ಜೈಪುರಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಹೋಗಿ ಅಲ್ಲಿಂದ ರಿಶಿಕೇಶ್​ ತೆರಳಿ ಮತ್ತೆ ದೆಹಲಿಗೆ ಹೋಗಿದ್ದಾಳೆ. ಮತ್ತೆ ರಿಶಿಕೇಶ್​ ಹಾಗೂ ಹರಿದ್ವಾರಕ್ಕೆ ತೆರಳಿ ಮತ್ತೆ ದೆಹಲಿಗೆ ಬಂದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

18 ದಿನಗಳ ಪ್ರಯಾಣದಲ್ಲಿ ಆಕೆಯ ಬಳಿ ಗುರುತಿನ ಚೀಟಿ ಇಲ್ಲದ ಕಾರಣ ಆಕೆಗೆ ಎಲ್ಲಿಯೂ ಹೋಟೆಲ್​ ಸಿಕ್ಕಿಲ್ಲ. ಹೀಗಾಗಿ ರಾತ್ರಿಯ ವೇಳೆ ಮಲಗಲು ಆಕೆ ಬೋರ್ಡಿಂಗ್​ ಬಸ್​ನಲ್ಲಿಯೇ ಪ್ರಯಾಣ ಮಾಡಿದ್ದಾಳೆ. 18 ದಿನಗಳ ಕಾಲ ಚಿಪ್ಸ್​, ಬಿಸ್ಕೆಟ್​ ಹಾಗೂ ನೀರು ಕುಡಿದು ಬದುಕಿದ್ದಾಳೆ. ಅಷ್ಟು ದಿನಗಳ ಕಾಲ ಆಕೆ ಸ್ನಾನವನ್ನೂ ಮಾಡಿಲ್ಲ.

ಪಾಲಕರ ದೂರಿನ ಅನ್ವಯ ಬಾಲಕಿಯನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಜೈಪುರದಲ್ಲಿ ಬಸ್​ ಟಿಕೆಟ್​ ಬುಕ್​ ಮಾಡಲು ತನ್ನ ಸಹೋದರನ ಇಮೇಲ್​ ಐ.ಡಿ.ಯನ್ನು ನೀಡಿದಾಗ ಆಕೆಯ ಜಾಡನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಆದರೆ, ಅಲ್ಲಿಗೆ ಹೋಗುವಷ್ಟರಲ್ಲಿ ಆಕೆ ಅಲ್ಲಿರಲಿಲ್ಲ. ಕೊನೆಗೆ ದೆಹಲಿಯಲ್ಲಿ ಸಿಕ್ಕಿಬಿದ್ದಿದ್ದು, ಕೊನೆಗೂ ಪ್ರಕರಣ ಸುಖಾಂತ್ಯ ಕಂಡಿದೆ. (ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...