ಪ್ರತಿಫಲಾಪೇಕ್ಷೆ ಇಲ್ಲದೆ ಕೆಲಸ

installation ceremony
ಕುಂದಾಪುರ ವಕೀಲರ ಸಂಘದ 2024-25ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಉದ್ಘಾಟಿಸಿ ಹೈಕೋರ್ಟ್ ನ್ಯಾಯಾಮೂರ್ತಿ ರಾಜೇಶ್ ರೈ ಕಲ್ಲಂಗಳ ಮಾತನಾಡಿದರು. ಹಂದಟ್ಟು ಪ್ರಮೋದ್ ಹಂದೆ, ಶಾಂತವೀರ ಶಿವಪ್ಪ, ಅಬ್ದುಲ್ ರಹೀಮ್ ಹುಸೈನ್ ಶೇಖ್ ಮತ್ತಿತರರಿದ್ದರು.
Published on

ಗಂಗೊಳ್ಳಿ: ದೇವರ ಮೇಲಿನ ಭಯ ಮತ್ತು ಭಕ್ತಿ ಜ್ಞಾನ ಕೊಡುತ್ತದೆ. ನಾವು ಬದುಕಿನಲ್ಲಿ ತಪ್ಪು ಮಾಡದಂತೆ ಎಚ್ಚರಿಸುತ್ತದೆ. ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಕೆಲಸ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಹೇಳಿದರು.

ಕುಂದಾಪುರದ ಕೋರ್ಟ್ ಆವರಣದಲ್ಲಿ ಶನಿವಾರ ಕುಂದಾಪುರ ವಕೀಲರ ಸಂಘದ 2024-25ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ್ ಹಂದೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ, ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೈನ್ ಶೇಖ್, ಉಪಾಧ್ಯಕ್ಷ ಸಂದೇಶ್ ಕುಮಾರ್ ಶೆಟ್ಟಿ, ಜತೆ ಕಾರ್ಯದರ್ಶಿ ಗೋವಿಂದ ನಾಯ್ಕ ಜಡ್ಕಲ್ ಮತ್ತು ಖಜಾಂಚಿ ಐ.ನಾಗರಾಜ್ ರಾವ್ ಉಪಸ್ಥಿತರಿದ್ದರು.

ಹಿರಿಯ ವಕೀಲ ಜಿ.ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವೈ.ಶರತ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲೆ ಶ್ಯಾಮಲಾ ಭಂಡಾರಿ ನ್ಯಾಯಮೂರ್ತಿಗಳನ್ನು ಪರಿಚಯಿಸಿದರು. ಉಮೇಶ್ ಶೆಟ್ಟಿ ಶಾನ್ಕಟ್ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ ಗಿಳಿಯಾರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net