ಗಂಗೊಳ್ಳಿ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್‌ನ ಪದಪ್ರದಾನ ಕಾರ್ಯಕ್ರಮ ಕುಂದಾಪುರದಲ್ಲಿ ಭಾನುವಾರ ನಡೆಯಿತು.
ಪ್ರವೀಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾ ಗವರ್ನರ್ ವಿ.ಜಿ.ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿ ಶುಭ ಹಾರೈಸಿದರು. ಲಯನ್ಸ್ ಜಿಲ್ಲಾ ರಾಯಭಾರಿ ಅರುಣ್ ಕುಮಾರ್ ಹೆಗ್ಡೆ, ಪ್ರಾಂತ್ಯಾಧ್ಯಕ್ಷ ಜಗದೀಶ್ ಶೆಟ್ಟಿ, ಪ್ರಾಂತೀಯ ಕಾರ್ಯದರ್ಶಿ ನರಸಿಂಹ ದೇವಾಡಿಗ, ವಲಯಾಧ್ಯಕ್ಷ ಡಾ.ಶಿವಕುಮಾರ್ ಶುಭ ಹಾರೈಸಿದರು.
ನೂತನ ಅಧ್ಯಕ್ಷರಾಗಿ ದಿನಕರ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಧರ ಮರವಂತೆ, ನೂತನ ಖಜಾಂಚಿಯಾಗಿ ಜಗದೀಶ್ ವಾಸುದೇವ, ಪ್ರಥಮ ಉಪಾಧ್ಯಕ್ಷೆಯಾಗಿ ಮಾಲಿನಿ ಸತೀಶ್ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರದ ಎರಡು ಅಂಗನವಾಡಿ ಶಾಲೆಗಳಿಗೆ 40 ಜತೆ ಸಮವಸ್ತ್ರ ವಿತರಿಸಲಾಯಿತು. ಬಳಿಕ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಐವರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಅಭಿನಂದಿಸಲಾಯಿತು.
ನಿರ್ಗಮನ ಖಜಾಂಚಿ ಸುನೀಲ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಶ್ರೀಧರ್ ಮರವಂತೆ ವಂದಿಸಿದರು. ಮಾಲಿನಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು.