

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆಯನ್ನು ಸದ್ಯದಲ್ಲಿ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ "ಕನ್ನಡ ರಾಜ್ಯೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದರು.
1983ರಲ್ಲಿ ಕನ್ನಡ ಕಾವಲು ಸಮಿತಿ ಅಧ್ಯನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಸರಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಭಾಷೆ, ಸಂಸತಿ ಬಗ್ಗೆ ಅಭಿಮಾನ ಇರಬೇಕು. ಬೇರೆ ಭಾಷೆ ಕಲಿತರೂ ತಾಯಿ ಭಾಷೆ ಕನ್ನಡವನ್ನು ಮರೆಯಬಾರದು. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣ ನಿರ್ಮಿಸಿದಾಗ ಮಾತ್ರ ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಲಿದೆ. ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂದರು.
ನಿಜವಾದ ನಾಯಕ ವಾಟಾಳ್ ನಾಗರಾಜ್:
ದೀರ್ಕಾಲದಿಂದ ಕನ್ನಡ ನಾಡು, ನುಡಿ, ನೆಲ, ಜಲ ರಣೆಗೆ ವಾಟಾಳ್ ನಾಗರಾಜ್ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಗಳಿಂದ ಆಹ್ವಾನ ಬಂದಿದ್ದರೂ ಕನ್ನಡ ಚಳವಳಿ ಪ ಬಿಟ್ಟು ಹೋಗಲಿಲ್ಲ. ಕೆಂಗಲ್ ಹನುಮಂತಯ್ಯ, ವೀರೇಂದ್ರ ಪಾಟೀಲ್, ದೇವರಾಜ ಅರಸು, ಗುಂಡೂರಾವ್ ಮತ್ತು ನನ್ನನ್ನು ಸೇರಿ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ. ಮಾತೃಭಾಷೆ, ನೆಲ ಜಲದ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ನಾನು ವಿದ್ಯಾರ್ಥಿದೆಸೆಯಿಂದಲೂ ವಾಟಾಳ್ ನಾಗರಾಜ್ ಅವರ ಭಾಷೆಯನ್ನು ಕೇಳುತ್ತಾ ಬಂದಿದ್ದೇನೆ. ಅವರನ್ನು ನಾಯಕರು ಎಂದು ತಾನು ಸಂಭೋದಿಸುತಿದ್ದು, ನಿಜವಾಗಿಯೂ ಜನ ಅವರನ್ನು ನಾಯಕರಾಗಿ ಮಾಡಿದ್ದಾರೆ ಎಂದು ಸಿಎಂ ಸ್ಮರಿಸಿದರು.