ರಾಜ್ಯದ 120 ಸ್ಥಳಗಳಲ್ಲಿ ಗಾಂಧಿ ನೆನಪಿನ ಸ್ತಂಭ ಸ್ಥಾಪನೆ

blank

ಬೆಂಗಳೂರು: ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣಾ ಸಮಿತಿ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಿತು.
ಬೆಳಗಾವಿಯಲ್ಲಿ ಡಿಸೆಂಬರ್ 26, 27ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸಾರ್ವಜನಿಕ ಸಭೆ ಜತೆಗೆ ವರ್ಷಪೂರ್ತಿ ಗಾಂಧಿ ತತ್ವಗಳ ಕುರಿತ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಹಾಗೆಯೇ, ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ಸಚಿವರಾದ ಎಚ್.ಕೆ.ಪಾಟೀಲ್, ಜಮೀರ್ ಅಹಮದ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ರಮಾನಾಥ್ ರೈ, ಬಿ.ಎಲ್.ಶಂಕರ್, ಶಾಸಕರಾದ ಆಸಿಫ್ ಸೇಠ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾರ್ಯದರ್ಶಿ ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಗಾಂಧಿ ಭವನದ ಪದಾಧಿಕಾರಿಗಳು, ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ತೀರ್ಮಾನಗಳು

1. ಶತಮಾನೋತ್ಸವ ಅಂಗವಾಗಿ ವರ್ಷವಿಡೀ ಗಾಂಧೀ ಭಾರತ ಹೆಸರಿನಲ್ಲಿ ಕಾರ್ಯಕ್ರಮಗಳ ಆಯೋಜನೆ
2. ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.
3. ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.
4. ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ಕಚೇರಿ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿ.
5. ಕಣಬರಗಿಯಲ್ಲಿ ಗಂಗಾಧರ ರಾವ್ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.
6. ಅಟನ್ ಬರೋ ನಿರ್ಮಿಸಿದ ಗಾಂಧಿ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಾಣ.
7. ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.
6. ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.
7. ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆ

Share This Article

ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …