ವಾರಾಳಿ ಶ್ರೀ ದುರ್ಗಾಪರಮೇಶ್ವರಿ ದೇವರ ಬಿಂಬ ಪ್ರತಿಷ್ಠಾಪನೆ

kon (2)
Published on

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ವಾರಾಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನ ಮತ್ತು ಶ್ರೀ ಬ್ರಹ್ಮಬೈದರ್ಕಳ ಮತ್ತು ಶ್ರೀ ಶಿವರಾಯ ಸ್ವಾಮಿ ಹಾಗೂ ಪರಿವಾರ ದೈವಗಳ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ವಾರಾಳಿ ಬಾಲಕೃಷ್ಣ ಕರಬ ಪ್ರಧಾನ ಅರ್ಚಕತ್ವದಲ್ಲಿ ವಿಧಿ ವಿಧಾನಗಳು ನೆರವೇರಿದವು.

ಬೆಳಗ್ಗೆ ಶ್ರೀ ದುರ್ಗಾಪರಮೇಶ್ವರಿ ದೇವರ ಬಿಂಬ ಪ್ರತಿಷ್ಠಾಪನೆ, ಜೀವ ಕುಂಭಾಭಿಷೇಕ ತತ್ವ ಕಲಶಹೋಮ, ತತ್ವ ಕಲಶಾಭಿಷೇಕ, ಚಂಡಿಕಾಹೋಮ, ವಾಗಂಭಣೀಸೂಕ್ತ ಯಾಗ, ಮಹಾಪೂಜೆ ನಡೆಯಿತು. ಸಂಜೆ ಶ್ರೀದೇವಿ ಸನ್ನಿಧಿಯಲ್ಲಿ ಪಂಚದುರ್ಗಾ ದೀಪ ನಮಸ್ಕಾರ, ಶ್ರೀ ಶಿವರಾಯ ಸ್ವಾಮಿ ಸನ್ನಿಧಿಯಲ್ಲಿ ಸ್ಥಾನ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷ್ನೋ ಹೋಮ, ವಾಸ್ತುಪೂಜಾ ಬಲಿ, ಅಧಿವಾಸ ಪೂಜೆ, ಅಧಿವಾಸ ಹೋಮ, ಬಿಂಬ ಪ್ರತಿಷ್ಠೆ, ಬ್ರಹ್ಮಕಲಶ ಸ್ಥಾಪನೆ, ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ ನಡೆಯಿತು.

ಆನುವಂಶಿಕ ಮೊಕ್ತೇಸರ ವಿಠಲ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ, ಗೌರವಾಧ್ಯಕ್ಷ ಕಿಶೋರ್ ಕುವಾರ್ ಹೆಗ್ಡೆ, ಕುಟುಂಬದ ಹಿರಿಯರಾದ ಸದಾನಂದ ಶೆಟ್ಟಿ, ಸಮಿತಿ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ, ಕೋಶಾಧಿಕಾರಿ ಎಂ.ಜಯರಾಮ ಶೆಟ್ಟಿ, ಬ್ರಹ್ಮಬೈದರ್ಕಳ ಗರಡಿಯ ಪೂಜಾರಿ ಕೃಷ್ಣ ಪೂಜಾರಿ, ಸಮಿತಿ ಪದಾಧಿಕಾರಿಗಳು, ಸದಸ್ಯರು, ಅರ್ಚಕರು, ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net