ಅಡಕೆಗೆ ಅವಲಂಬಿತರಾಗದೆ ಮಿಶ್ರ ಬೆಳೆ ಕಡೆ ರೈತರ ಗಮನ

Kdb_groundnut
Published on

ಕಡಬ: ಕೃಷಿಕ ಸಮಾಜ ರೈತರು ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಲಿದೆ. ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ಸಿಗಲಿರುವ ಸವಲತ್ತು ಬಗ್ಗೆ ರೈತರಿಗೆ ಮಾಹಿತಿ ನೀಡುವ ಉದ್ದೇಶವಿಟ್ಟುಕೊಳ್ಳಲಾಗಿದೆ. ರೈತರು ಅನೇಕ ಸಮಸ್ಯೆಗಳ ನಡುವೆ ಅಡಕೆ ಬೆಳೆಯುತಿದ್ದು ಏಕ ಬೆಳೆಗೆ ಅವಲಂಬಿಸದೆ ಮಿಶ್ರ ಬೆಳೆಯನ್ನು ಅನುಸರಿಸಬೇಕು ಎಂದು ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ವಿಜಯಕುಮಾರ್ ರೈ ಹೇಳಿದರು.

ಕಡಬ ರೈತ ಸಂಪರ್ಕ ಕೇಂದ್ರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ, ಕಡಬ ತಾಲೂಕು ಕೃಷಿಕ ಸಮಾಜದ ಪ್ರಥಮ ಕಾರ‌್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿಕ ಸಮಾಜದ ಕಡಬ ತಾಲೂಕು ಉಪಾಧ್ಯಕ್ಷ ಕೆ.ಆರ್.ಸುಕುಮಾರ್, ಜಿಲ್ಲಾ ಪ್ರತಿನಿಧಿ ಮಹೇಶ್ ಕೆ.ಸವಣೂರು ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕರಾದ ಯಶಸ್, ಮಂಜುನಾಥ್, ಕಡಬ ತಾಲೂಕು ಪಶುವೈದ್ಯಾಧಿಕಾರಿ ಡಾ.ಅಜಿತ್, ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಯಶೋಧರ ಇಲಾಖಾ ಮಾಹಿತಿ ನೀಡಿದರು.

ಕೃಷಿಕ ಸಮಾಜಕ್ಕೆ ಆಯ್ಕೆಯಾಗಿರುವ ಪ್ರತಿನಿಧಿಗಳಿಗೆ ಪ್ರಮಾಣಪತ್ರ ನೀಡಲಾಯಿತು. ಜಿಲ್ಲಾಧ್ಯಕ್ಷ ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು. ಕಡಬ ತಾಲೂಕು ಕೃಷಿ ಅಧಿಕಾರಿ ಟಿ.ಎಸ್.ಭರಮಣ್ಣನವರ್ ಸ್ವಾಗತಿಸಿ ನಿರೂಪಿಸಿದರು. ಸಿಬ್ಬಂದಿ ಗೀತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net