ಪಕ್ಷಾತೀತವಾಗಿ ‘ಮಹಾ’ ಸರ್ಕಾರದ ಮೇಲೆ ಒತ್ತಡ ತನ್ನಿ

ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣೆಗೆ ಮಹಾರಾಷ್ಟ್ರ ಸರ್ಕಾರ ಮಾನವೀಯತೆ ದೃಷ್ಟಿಯಿಂದ ನೀರು ಹರಿಸುವಂತೆ ರಾಜ್ಯ ಸರ್ಕಾರ ಒತ್ತಡ ತರಬೇಕು. ಇಲ್ಲವಾದಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಕನ್ನಡ ಪರ ಸಂಘಟನೆಗಳು ಹಾಗೂ ಅನ್ನದಾತರೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಎಚ್ಚರಿಸಿದ್ದಾರೆ.

ಕೃಷ್ಣಾ ನದಿಗೆ ಮಹಾ ಸರ್ಕಾರ ನೀರು ಹರಿಸುವಂತೆ ಆಗ್ರಹಿಸಿ ಸೋಮವಾರ ಕರವೇ ಕಾರ್ಯಕರ್ತರು ಹಾಗೂ ವಿವಿಧ ಶ್ರೀಗಳ ನೇತೃತ್ವದಲ್ಲಿ ತಾಲೂಕಿನ ಮಾಂಜರಿ ಹತ್ತಿರದ ಕೃಷ್ಣಾ ನದಿ ಸೇತುವೆ ಬಳಿ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು ನೀರು ಬಿಡುಲು ಮಹಾ ಸರ್ಕಾರಕ್ಕೆ ಪಕ್ಷಾತೀತವಾಗಿ ಒತ್ತಡ ಹೇರಬೇಕು ಎಂದರು.

ಮುಖಂಡ ಕೆ.ಪಿ.ಮಗೆನ್ನವರ, ಚಿಕ್ಕೋಡಿ ಸಂಪಾದನಾ ಸ್ವಾಮೀಜಿ ಮಾತನಾಡಿದರು. ಕರವೇ ಜಿಲ್ಲಾಧ್ಯಕ್ಷ ಮಹದೇವ ತಳವಾರ ಸೇರಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು,ರೈತರು, ಯುವಮುಖಂಡರು ಮತ್ತಿತರರಿದ್ದರು.