More

    ಮಾರ್ಗಸೂಚಿ ಪಾಲನೆಗೆ ತಾಕೀತು

    ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯ ಪ್ರಕರಣಗಳು ಹೆಚ್ಚಾಗದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಹಾಗೂ ಗುರಿಯಂತೆ ತ್ವರಿತವಾಗಿ ಸಂರ್ಪತರ ಪತ್ತೆ, ತಪಾಸಣೆ, ಜೊತೆಗೆ ಲಸಿಕಾ ಕಾರ್ಯದಲ್ಲಿ ಯಾವುದೇ ಹಿನ್ನಡೆಯಾಗದಂತೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ವಿಡಿಯೋ ಸಂವಾದದ ಮೂಲಕ ಆರೋಗ್ಯ ಅಧಿಕಾರಿಗಳೊಂದಿಗೆ ರ್ಚಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿರುವ ಹಾಸಿಗೆಗಳ ಮಾಹಿತಿ, ಆಕ್ಸಿಜನ್ ಸಹಿತ ಬೆಡ್​ಗಳ ಸಂಖ್ಯೆ, ಐಸಿಯು ಬೆಡ್​ಗಳು, ಕೋವಿಡ್​ಕೇರ್ ಸೆಂಟರ್​ಗಳಲ್ಲಿ ಕಳೆದ ಸಾಲಿನಲ್ಲಿ ವ್ಯವಸ್ಥೆ ಮಾಡಿದ ಬೆಡ್​ಗಳ ಸಂಖ್ಯೆ ಒಳಗೊಂಡಂತೆ ಪೂರ್ಣ ಮಾಹಿತಿಯನ್ನು ಎಲ್ಲರೂ ಹೊಂದಿರಬೇಕು. ಎಲ್ಲ ವ್ಯವಸ್ಥೆಗಳು ಸಿದ್ಧವಾಗಿರಬೇಕು. ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಅಗತ್ಯ ಸಿಬ್ಬಂದಿ ನೇಮಕಾತಿಯನ್ನು ಮಾರ್ಗಸೂಚಿಯಂತೆ ಮಾಡಿಕೊಳ್ಳಬೇಕು. ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು.

    ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್​ಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಹಾಗೂ ಪೊಲೀಸ್ ಅಧಿಕಾರಿಗಳು, ತಾಪಂ ಇಒಗಳು ಮಾರ್ಗಸೂಚಿಯ ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಇಂದಿನಿಂದಲೇ ಕಾರ್ಯಾನುಷ್ಠಾನಕ್ಕೆ ಮುಂದಾಗಬೇಕು. ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯಂತೆ ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸಾಮಾಜಿಕ ಆಚರಣೆಗಳು ಅಥವಾ ಸಮಾರಂಭಗಳಲ್ಲಿ 3.25 ಮೀಟರ್ ಅಂತರ ಪಾಲಿಸುವುದು ಕಡ್ಡಾಯ. ಮದುವೆ-ತೆರೆದ ಪ್ರದೇಶಗಳಲ್ಲಿ 200 ಜನರು ಮೀರಬಾರದು. ಕಲ್ಯಾಣಮಂಟಪ, ಸಭಾಂಗಣ ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಜನರು ಮೀರುವಂತಿಲ್ಲ. ಜನ್ಮದಿನ ಹಾಗೂ ಇತರೆ ಆಚರಣೆಗಳಲ್ಲಿ 50 ಜನರು, ಸಭಾಂಗಣ ಇತ್ಯಾದಿ ಮುಚ್ಚಿದ ಪ್ರದೇಶದಲ್ಲಿ 25 ಜನರು ಮಾತ್ರ ಭಾಗವಹಿಸಬೇಕು. ನಿಧನ ಅಥವಾ ಶವಸಂಸ್ಕಾರ ತೆರೆದ ಪ್ರದೇಶದಲ್ಲಿ 50 ಜನರು, ಹಾಲ್ ಸಭಾಂಗಣದಲ್ಲಿ 25 ಜನರು ಮೀರಬಾರದು. ಅಂತ್ಯಕ್ರಿಯೆಯಲ್ಲಿ 25 ಜನ ಭಾಗವಹಿಸಬೇಕು. ಇತರೆ ಸಮಾರಂಭಗಳಲ್ಲಿ ಹಾಲ್​ನ ವಿಸ್ತೀರ್ಣಕ್ಕೆ ತಕ್ಕಂತೆ 50 ಜನರು ಮೀರಬಾರದು. ರಾಜಕೀಯ ಆಚರಣೆಗಳು ಅಥವಾ ಸಮಾರಂಭಗಳಿಗೆ 200 ಜನರ ಮಿತಿಗೊಳಿಸಲಾಗಿದೆ. ಧಾರ್ವಿುಕ ಆಚರಣೆ ಅಥವಾ ಸಮಾರಂಭಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಅನುಷ್ಠಾನಕ್ಕೆ ಎಲ್ಲರೂ ಈಗಿನಿಂದಲೇ ಸಿದ್ಧರಾಗಬೇಕು. ಕಾಲಕಾಲಕ್ಕೆ ಸರ್ಕಾರ ಹೊರಡಿಸುವ ಕೋವಿಡ್ ನಿಯಮಾವಳಿಗಳ ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದರು.

    ಸಭೆಯಲ್ಲಿ ಸಿಇಒ ಮಹಮ್ಮದ ರೋಷನ್, ಎಸ್​ಪಿ ಕೆ.ಜಿ. ದೇವರಾಜ್, ಹಾವೇರಿ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಡಿಎಚ್​ಒ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಡಾ. ಎಂ. ಜಯಾನಂದ, ಡಾ. ಪ್ರಭಾಕರ ಕುಂದೂರ ಇತರರಿದ್ದರು.

    ಸಭಾಂಗಣ ಕಲ್ಯಾಣ ಮಂಟಪ, ಸಿನಿಮಾ ಮಂದಿರ ಹಾಲ್​ಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸಬೇಕು. ಮದುವೆ ಸಮಾರಂಭಕ್ಕೆ ಅನುಮತಿ ಕಡ್ಡಾಯ. ಸಾರ್ವಜನಿಕರು ಸರ್ಕಾರದ ಪ್ರಮಾಣಿಕೃತ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪರಸ್ಪರ ಅಂತರದೊಂದಿಗೆ ಮಾಸ್ಕ್​ಗಳನ್ನು ಧರಿಸಿ ಓಡಾಡುವಂತೆ ಸೂಚಿಸಬೇಕು.

    | ಸಂಜಯ ಶಟ್ಟೆಣ್ಣವರ, ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts