ಯೋಗ ದಿನಕ್ಕೆ ಸಿದ್ಧತೆ ಕೈಗೊಳ್ಳಲು ಸೂಚನೆ

ಚಾಮರಾಜನಗರ: ಐದನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದಲ್ಲಿ ವ್ಯವಸ್ಥಿತವಾಗಿ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯೋಗ ದಿನಾಚರಣೆಯನ್ನು ಜೂ.21ರಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದೆ. ಯೋಗ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಅಗತ್ಯವಿರುವ ಎಲ್ಲ ಸಿದ್ಧತಾ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಮೈದಾನಕ್ಕೆ ನೆಲಹಾಸು, ಧ್ವನಿ ವರ್ಧಕ, ದಾಖಲಾತಿ ವ್ಯವಸ್ಥೆ ಮತ್ತು ಪ್ರಾತ್ಯಕ್ಷಿಕೆ ಮಾಡಲು 2ಕಡೆ ವೇದಿಕೆ ವ್ಯವಸ್ಥೆ ಮಾಡಬೇಕು. ಯೋಗ ಪ್ರದರ್ಶನ ನೀಡುವವರಿಗೆ ಲಘು ಉಪಾಹಾರ ವ್ಯವಸ್ಥೆ ಮಾಡಲು ಸೂಚಿಸಿದರು.
ಸರ್ಕಾರದ ಸೂಚನೆಯಂತೆ ಕಾರ್ಯಕ್ರಮವನ್ನು ಆಯೋಜಿಸಲು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣವರ್ ಮಾತನಾಡಿ, ನಗರದ ಜೋಡಿ ರಸ್ತೆಯಿಂದ ಪೊಲೀಸ್ ಕವಾಯಿತು ಮೈದಾನದವರೆಗೆ ಸ್ವಚ್ಛತೆ ಕೈಗೊಳ್ಳಲು ತಿಳಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಆರ್.ರಾಚಯ್ಯ, ಚಾಮರಾಜನಗರ ಬಿಇಒ ಎನ್.ಲಕ್ಷ್ಮೀಪತಿ, ಎಸ್.ಪಿ.ವೈ.ಎಸ್.ಎಸ್.ಅಧ್ಯಕ್ಷರಾದ ಎಚ್.ಜಿ ಕುಮಾರಸ್ವಾಮಿ, ಆಯುಷ್ ಇಲಾಖೆಯ ವೈದ್ಯಧಿಕಾರಿ ಡಾ.ಶ್ರೀನಿವಾಸ್ ಕೊತಬಾಳ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *